ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

1993ರ ಮುಂಬೈ ಸರಣಿ ಸ್ಫೋಟ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಅಕ್ಷರ ಗಾತ್ರ

ಮುಂಬೈ: 1993ರ ಮುಂಬೈ ಸರಣಿ ಬಾಂಬ್‌ ಸ್ಫೋಟ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಗುಜರಾತ್‌ನ ಭಯೋತ್ಪಾದನಾ ನಿಗ್ರಹ ದಳವು (ಎಟಿಎಸ್‌) ಮಂಗಳವಾರ ಬಂಧಿಸಿದೆ.

‘ನಕಲಿ ಪಾಸ್‌ಪೋರ್ಟ್‌ ಹೊಂದಿರುವ ಶಂಕೆಯ ಮೇರೆಗೆ 4 ಮಂದಿಯನ್ನು ವಶಕ್ಕೆ ಪಡೆದಿದ್ದೇವೆ. ಅವರು 1993ರ ಬಾಂಬೆ ಸರಣಿ ಸ್ಫೋಟದ ಆರೋಪಿಗಳು ಎಂಬುದು ತನಿಖೆ ವೇಳೆ ಖಚಿತವಾಗಿದೆ. ಕೂಡಲೇ ಅವರನ್ನು ಬಂಧಿಸಲಾಗಿದೆ. ಬಂಧಿತರನ್ನು ಅಬುಬಕರ್, ಯೂಸುಫ್ ಭಟ್ಕಾ, ಶೋಬ್ ಬಾಬಾ, ಸಯ್ಯದ್ ಖುರೇಷಿ ಎಂದು ಗುರುತಿಸಲಾಗಿದೆ’ ಎಂದು ಗುಜರಾತ್ ಎಟಿಎಸ್ ಡಿಐಜಿ ದೀಪನ್ ಭದ್ರನ್ ತಿಳಿಸಿದ್ದಾರೆ.

1993ರ ಮಾರ್ಚ್‌ 12ರಂದು ಮುಂಬೈ ನಗರದ 12 ಕಡೆಗಳಲ್ಲಿ ಸಂಭವಿಸಿದ ಸರಣಿ ಸ್ಫೋಟಗಳಲ್ಲಿ ಕನಿಷ್ಠ 257 ಮಂದಿ ಮೃತಪಟ್ಟಿದ್ದರು.

ಭೂಗತ ಪಾತಕಿ ದಾವೂದ್‌ ಇಬ್ರಾಹಿಂಮುಂಬೈ ಸರಣಿ ಬಾಂಬ್‌ ದಾಳಿಯ ರೂವಾರಿಯಾಗಿದ್ದಾನೆ.

ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್‌ ಸೇರಿದಂತೆ ಆತನ ಸಹಚರರನ್ನು ಹಲವು ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಮುಂಬೈನ ಮಾದಕವಸ್ತು ನಿಯಂತ್ರಣ ಬ್ಯೂರೊ (ಎನ್‌ಸಿಬಿ) ಅಧಿಕಾರಿಗಳು ಬಂಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT