ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ಪಟಾಕಿ ನಿಷೇಧ: ಕೇಜ್ರಿವಾಲ್ 'ಧರ್ಮ ವಿರೋಧಿ' ಎಂದ ಗುಜರಾತ್ ಬಿಜೆಪಿ

Last Updated 23 ಅಕ್ಟೋಬರ್ 2022, 13:07 IST
ಅಕ್ಷರ ಗಾತ್ರ

ರಾಜ್‌ಕೋಟ್‌ (ಗುಜರಾತ್‌): ದೆಹಲಿ ಸರ್ಕಾರವು ರಾಷ್ಟ್ರ ರಾಜಧಾನಿಯಲ್ಲಿ ಸಂಪೂರ್ಣ ಪಟಾಕಿ ನಿಷೇಧಿಸುವ ತೀರ್ಮಾನ ಕೈಗೊಂಡಿದೆ. ಈ ಸಂಬಂಧ ಅಲ್ಲಿನ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ವಿರುದ್ಧ ಕಿಡಿಕಾರಿರುವ ಗುಜರಾತ್‌ ಬಿಜೆಪಿ ಮುಖ್ಯಸ್ಥ ಸಿ.ಆರ್‌.ಪಾಟೀಲ್‌, 'ಧರ್ಮ ವಿರೋಧಿ'ಗಳು ಜನರು ಹಬ್ಬಗಳನ್ನು ಸಂಭ್ರಮಿಸದಂತೆ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ದೆಹಲಿ ಸರ್ಕಾರವು, 2023ರ ಜನವರಿ 1ರ ವರೆಗೆ ಎಲ್ಲ ಮಾದರಿಯ ಪಟಾಕಿಗಳ ಉತ್ಪಾದನೆ, ಮಾರಾಟ ಮತ್ತು ಬಳಕೆ ಮೇಲೆ ಸಂಪೂರ್ಣ ನಿಷೇಧವನ್ನುಕಳೆದ ತಿಂಗಳು ಜಾರಿ ಮಾಡಿದೆ. ಅತಿಯಾದ ವಾಯುಮಾಲಿನ್ಯಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಳೆದೆರಡು ವರ್ಷಗಳಿಂದಲೂರಾಷ್ಟ್ರ ರಾಜಧಾನಿಯಲ್ಲಿ ನಿಷೇಧ ಕ್ರಮವನ್ನು ಮುಂದುವರಿಸಲಾಗುತ್ತಿದೆ.

ದೆಹಲಿಯಲ್ಲಿ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸಿದರೆ, ಆರು ತಿಂಗಳು ಜೈಲು ಮತ್ತು ₹ 200 ದಂಡ ವಿಧಿಸಲಾಗುವುದು ಎಂದು ದೆಹಲಿ ಪರಿಸರ ಸಚಿವ ಗೋಪಾಲ್‌ ರಾಯ್‌ ಇತ್ತೀಚೆಗೆ ಎಚ್ಚರಿಕೆ ನೀಡಿದ್ದರು. ಪಟಾಕಿ ಉತ್ಪಾದನೆ, ಸಂಗ್ರಹಣೆ ಮತ್ತು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ. ಸ್ಫೋಟಕ ಬಳಕೆ ಕಾಯ್ದೆಯ 9ಬಿ ಸೆಕ್ಷನ್‌ ಅಡಿಯಲ್ಲಿ ₹ 5,000 ದಂಡ ಮತ್ತು ಮೂರು ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು ಎಂದೂ ಹೇಳಿದ್ದರು.

ದೆಹಲಿಯಲ್ಲಿ ಪಟಾಕಿ ನಿಷೇಧ; ಗುಜರಾತ್‌ನಲ್ಲಿ ಟೀಕೆ
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಎಪಿ ರಾಷ್ಟ್ರೀಯ ಸಂಚಾಲಕರೂ ಆಗಿರುವ ಅರವಿಂದ ಕೇಜ್ರಿವಾಲ್‌, ತಮ್ಮ ಪಕ್ಷದ ಪರ ಪ್ರಚಾರ ನಡೆಸಲು ಇತ್ತೀಚಿನ ದಿನಗಳಲ್ಲಿ ಹಲವು ಬಾರಿ ಗುಜರಾತ್‌ಗೆ ಭೇಟಿ ನೀಡಿದ್ದಾರೆ.

ಹೀಗಾಗಿ ಕೇಜ್ರಿವಾಲ್‌ ಅವರನ್ನು ಗುರಿಯಾಗಿಸಿಸಿ.ಆರ್‌.ಪಾಟೀಲ್‌ ವಾಗ್ದಾಳಿ ನಡೆಸಿದ್ದಾರೆ. ಶನಿವಾರ ನಡೆದ ಪಕ್ಷದ ಸಮಾವೇಶದಲ್ಲಿ ಮಾತನಾಡಿದ ಪಾಟೀಲ್‌, 'ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್‌ ಅವರು ದೆಹಲಿಯಲ್ಲಿ ಪಟಾಕಿಗೆ ನಿಷೇಧ ಹೇರಿದ್ದಾರೆ ಎಂಬ ಸುದ್ದಿಯನ್ನು ಇಂದು ಓದಿದೆ. ಆ ಸಹೋದರ (ಅರವಿಂದ ಕೇಜ್ರಿವಾಲ್‌) ಚುನಾವಣೆ ಸಲುವಾಗಿ ಗುಜರಾತ್‌ಗೆ ಬರಲು ಪ್ರಯತ್ನಿಸುತ್ತಿದ್ದಾರೆ. ಹಾಗಾದರೆ, ನೀವು ಪಟಾಕಿಗಳನ್ನು ಹೇಗೆ ಸಿಡಿಸುತ್ತೀರಿ? ಇಂತಹಧರ್ಮ ವಿರೋಧಿಗಳು ನಾವು ಹಬ್ಬಗಳನ್ನು ಆಚರಿಸದಂತೆ ಮಾಡುತ್ತಿದ್ದಾರೆ ಎಂಬುದನ್ನು ದಯವಿಟ್ಟು ಅರ್ಥ ಮಾಡಿಕೊಳ್ಳಿ' ಎಂದು ಹೇಳಿದ್ದಾರೆ.

ಜನರು ದೆಹಲಿಯಲ್ಲಿ ದೀಪಾವಳಿ ಸಂದರ್ಭದಲ್ಲಿ ಎರಡರಿಂದ ಮೂರು ಗಂಟೆ ಪಟಾಕಿಗಳನ್ನು ಸಿಡಿಸಲುಸಿಎಂ ಕೇಜ್ರಿವಾಲ್ ಅವರು ಅವಕಾಶ ಕಲ್ಪಿಸಬೇಕು ಎಂದುಬಿಜೆಪಿ ಸಂಸದ ಮನೋಜ್‌ ತಿವಾರಿ ಇತ್ತೀಚೆಗೆ ಆಗ್ರಹಿಸಿದ್ದರು.

ಬಿಜೆಪಿ ನಾಯಕರ ಟೀಕೆಗಳಿಕೆ ಪ್ರತಿಕ್ರಿಯಿಸಿರುವಎಎಪಿ,ಸುಪ್ರೀಂಕೋರ್ಟ್‌ ಆದೇಶದಂತೆ ಪಟಾಕಿ ನಿಷೇಧಿಸಲಾಗಿದೆ. ಬಿಜೆಪಿ ನಾಯಕರು ನ್ಯಾಯಾಲಯಕ್ಕೆ ಅಗೌರವ ತೋರುತ್ತಿದ್ದಾರೆ. ಪಟಾಕಿ ನಿಷೇಧದ ವಿಚಾರವಾಗಿ ಬಿಜೆಪಿ ನಾಯಕರು ದೆಹಲಿ ಸರ್ಕಾರವನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ. ಅರವಿಂದ್‌ ಕೇಜ್ರಿವಾಲ್‌ ಅವರನ್ನು ಹಿಂದೂ ವಿರೋಧಿ ಎಂದು ಬಿಂಬಿಸಲಾಗುತ್ತಿದೆಎಂದು ಹೇಳಿದೆ.

ಗುಜರಾತ್‌ನಲ್ಲಿ ಈ ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಆಡಳಿತಾರೂಢ ಬಿಜೆಪಿಗೆ ಕಠಿಣ ಸ್ಪರ್ಧೆ ನೀಡಲು ಎಎಪಿ ಪ್ರಯತ್ನಿಸುತ್ತಿದೆ. ತಮ್ಮ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೇರಿದರೆ ಪ್ರತಿ ತಿಂಗಳು 300 ಯೂನಿಟ್‌ ವಿದ್ಯುತ್‌, ಶಿಕ್ಷಣ ಸೇರಿದಂತೆ ಹಲವು ಸೌಲಭ್ಯಗಳನ್ನು ಉಚಿತವಾಗಿ ನೀಡುವುದಾಗಿಕೇಜ್ರಿವಾಲ್‌ ಈಗಾಗಲೇ ಘೋಷಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT