ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್ ಉಪಚುನಾವಣೆ ಮತ ಎಣಿಕೆ: 8ಪೈಕಿ 7ರಲ್ಲಿ ಬಿಜೆಪಿಗೆ ಮುನ್ನಡೆ

Last Updated 10 ನವೆಂಬರ್ 2020, 6:45 IST
ಅಕ್ಷರ ಗಾತ್ರ

ಗಾಂಧಿನಗರ:ಗುಜರಾತ್‌ನ ಎಂಟು ವಿಧಾನಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯ ಏಳು ಕ್ಷೇತ್ರಗಳಲ್ಲಿ ಆಡಳಿತಾರೂಢ ಬಿಜೆಪಿಯ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.ಒಂದು ಸ್ಥಾನದಲ್ಲಿಕಾಂಗ್ರೆಸ್‌ ಮುಂದಿದೆ.

ಚುನಾವಣಾ ಆಯೋಗದ ಮಾಹಿತಿಯ ಪ್ರಕಾರ ಮಂಗಳವಾರ ಬೆಳಿಗ್ಗೆ 10:30 ರವರೆಗೆ ಬಿಜೆಪಿ ಶೇ 53.13 ರಷ್ಟು ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಶೇ 35.1 ರಷ್ಟು ಮತಗಳನ್ನು ತನ್ನದಾಗಿಸಿಕೊಂಡಿದೆ.

ಮೊರ್ಬಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಜಯಂತಿಲಾಲ್‌ ಪಟೇಲ್‌ ಅವರು 1500 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ ಎಂದು ಚುನಾವಣಾ ಆಯೋಗದ ಅಂಕಿ ಅಂಶಗಳು ಹೇಳಿವೆ.

ಗುಜರಾತ್‌ನ ಎಂಟು ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 3 ರಂದು ಮತದಾನ ನಡೆದಿತ್ತು. ಇಂದು ಮುಂಜಾನೆ 8ಗಂಟೆಗೆ ಮತ ಎಣಿಕೆ ಕಾರ್ಯವು ಪ್ರಾರಂಭವಾಗಿದೆ.

ಜೂನ್‌ ತಿಂಗಳಲ್ಲಿ ನಡೆದ ರಾಜ್ಯಸಭಾ ಚುನಾವಣೆಸಂದರ್ಭದಲ್ಲಿ ಕಾಂಗ್ರೆಸ್‌ ಶಾಸಕರು ರಾಜೀನಾಮೆ ನೀಡಿದ ಕಾರಣ ಇಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಐವರು ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. 2017ರಲ್ಲಿ ನಡೆದ ಚುನಾವಣೆಯಲ್ಲಿ ಈ ಐವರು ಶಾಸಕರು ಗೆದ್ದಿದ್ದ ಕ್ಷೇತ್ರಗಳಲ್ಲೇ ಬಿಜೆಪಿ ಇವರನ್ನು ಮತ್ತೆ ಕಣಕ್ಕಿಳಿಸಿದೆ.

ಎಂಟು ಸ್ಥಾನಗಳಿಗಾಗಿ 81 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಗುಜರಾತ್‌ನ ಎಂಟು ಕ್ಷೇತ್ರಗಳ ಉಪಚುನಾವಣೆ ಜೊತೆಗೆ ಮಧ್ಯ ಪ್ರದೇಶದ 28 ಮತ್ತು ಉತ್ತರ ಪ್ರದೇಶದ ಏಳು, ಜಾರ್ಖಂಡ್‌, ಕರ್ನಾಟಕ, ನಾಗಾಲ್ಯಾಂಡ್‌ ಮತ್ತು ಒಡಿಶಾದ ತಲಾ ಎರಡು ಮತ್ತು ಛತ್ತೀಸಗಡ, ಹರಿಯಾಣ ಹಾಗೂ ತೆಲಂಗಾಣದ ತಲಾ ಒಂದೊಂದು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆದಿತ್ತು. ಬಿಹಾರದಲ್ಲಿ ವಿಧಾನಸಭಾ ಚುನಾವಣೆಗೆ ಮತದಾನ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT