ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೊಬ್ಬ ನಿವೃತ್ತ ಐಎಎಸ್ ಅಧಿಕಾರಿ ಬಿಜೆಪಿ ಸೇರ್ಪಡೆ

ಪ್ರಧಾನಿ ಮೋದಿಯವರ ಆಪ್ತ ಹಾಗೂ ಗುಜರಾತ್‌ ಕೇಡರ್‌ ಅಧಿಕಾರಿ
Last Updated 14 ಜನವರಿ 2021, 7:23 IST
ಅಕ್ಷರ ಗಾತ್ರ

ಲಖನೌ: ಇತ್ತೀಚೆಗಷ್ಟೇ ಸರ್ಕಾರದ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿದ್ದ ಗುಜರಾತ್‌ ಕೇಡರ್‌ನ ಐಎಎಸ್ ಅಧಿಕಾರಿ ಎ.ಕೆ.ಶರ್ಮಾ ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.

ಪಕ್ಷಕ್ಕಾಗಿ ಕೆಲಸ ಮಾಡುವ ಇಚ್ಛೆ ವ್ಯಕ್ತಪಡಿಸಿರುವ ಶರ್ಮಾ ಅವರು, ಶೀಘ್ರದಲ್ಲೇ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಪಕ್ಷದ ವಕ್ತಾರ ಚಂದ್ರ ಮೋಹನ್ ಗುರುವಾರ ತಿಳಿಸಿದ್ದಾರೆ.

ಶರ್ಮಾ ಅವರು ಬಿಜೆಪಿಗೆ ಸೇರ್ಪಡೆಗೊಳ್ಳುವ ಸಮಯದಲ್ಲೇ, ಉತ್ತರ ಪ್ರದೇಶದ ವಿಧಾನಪರಿಷತ್‌ನ 12 ಸ್ಥಾನಗಳಿಗೆ ಜನವರಿ 28ರಂದು ನಡೆಯುವ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುತ್ತದೆ. ಜನವರಿ 18ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

‘ಈ ಚುನಾವಣೆಯಲ್ಲಿ ಶರ್ಮಾ ಅವರನ್ನು ಪಕ್ಷದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುತ್ತಿದೆಯೇ‘ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಚಂದ್ರಮೋಹನ್, ‘ಚುನಾವಣೆಗೆ ಸ್ಪರ್ಧಿಸುವ ಎಲ್ಲ ಅಭ್ಯರ್ಥಿಗಳ ಬಗ್ಗೆ ಕೇಂದ್ರ ನಾಯಕರೇ ಅಂತಿಮಗೊಳಿಸುತ್ತಾರೆ‘ ಎಂದು ಹೇಳಿದರು.

ಉತ್ತರ ಪ್ರದೇಶದ ಮಾವು ಜಿಲ್ಲೆಯ 1988 ಬ್ಯಾಚ್‌ನ ಅಧಿಕಾರಿ ಶರ್ಮಾ, ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತರಾಗಿದ್ದಾರೆ. ಜತೆಗೆ ಗುಜರಾತ್‌ನಲ್ಲಿ ನರೇಂದ್ರ ಮೋದಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅವರೊಂದಿಗೆ ಕೆಲಸ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT