ಶುಕ್ರವಾರ, ಮೇ 20, 2022
23 °C

ಸಿಬಿಐ ಹಂಗಾಮಿ ಮುಖ್ಯಸ್ಥರಾಗಿ ಪ್ರವೀಣ್‌ ಸಿನ್ಹಾ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಸಿಬಿಐ ಹೆಚ್ಚುವರಿ ನಿರ್ದೇಶಕ ಪ್ರವೀಣ್‌ ಸಿನ್ಹಾ ಅವರನ್ನು ಹಂಗಾಮಿ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.

1988 ಬ್ಯಾಚ್‌ನ ಸಿನ್ಹಾ ಅವರು, ಗುಜರಾತ್‌ ಕೆಡರ್‌ನ ಐಪಿಎಸ್‌ ಅಧಿಕಾರಿಯಾಗಿದ್ದಾರೆ. ನೂತನ ನಿರ್ದೇಶಕರನ್ನು ನೇಮಿಸುವವರೆಗೂ ಸಿನ್ಹಾ ಅಧಿಕಾರದಲ್ಲಿ ಮುಂದುವರಿಯಲಿದ್ದಾರೆ. ಇದುವರೆಗೆ ನಿರ್ದೇಶಕರಾಗಿದ್ದ ರಿಶಿ ಕುಮಾರ್‌ ಶುಕ್ಲಾ ಬುಧವಾರ ನಿವೃತ್ತರಾದರು.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಸಚಿವ ಸಂಪುಟದ ನೇಮಕಾತಿ ಸಮಿತಿ ಪ್ರವೀಣ್‌ ಸಿನ್ಹಾ ನೇಮಕಕ್ಕೆ ಅನುಮೋದನೆ ನೀಡಿದೆ.

ಪ‍್ರಧಾನಿ, ಲೋಕಸಭೆಯಲ್ಲಿನ ವಿರೋಧ ಪಕ್ಷದ ನಾಯಕ ಮತ್ತು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅವರನ್ನೊಳಗೊಂಡ ಉನ್ನತ ಮಟ್ಟದ ಸಮಿತಿಯು ಸಿಬಿಐ ನಿರ್ದೇಶಕರನ್ನು ಆಯ್ಕೆ ಮಾಡುತ್ತದೆ. ಆದರೆ, ಈ ಶುಲ್ಲಾ ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲು ಸಮಿತಿ ಸಭೆಯನ್ನು ಇದುವರೆಗೆ ಕರೆದಿಲ್ಲ. ಹೀಗಾಗಿ, ಹಿರಿತನದ ಆಧಾರದ ಮೇಲೆ ಸಿನ್ಹಾ ಅವರನ್ನು ಹಂಗಾಮಿ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು