ಬುಧವಾರ, ಸೆಪ್ಟೆಂಬರ್ 22, 2021
24 °C

ದೆಹಲಿ ಪೊಲೀಸ್‌ ಕಮಿಷನರ್ ಆಗಿ ರಾಕೇಶ್‌ ಅಸ್ತಾನಾ ನೇಮಕ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಗುಜರಾತ್ ಕೇಡರ್‌ನ ಐಪಿಎಸ್‌ ಅಧಿಕಾರಿ ರಾಕೇಶ್‌ ಅಸ್ತಾನಾ ಅವರನ್ನು ದೆಹಲಿ ಪೊಲೀಸ್‌ ಕಮಿಷನರ್ ಆಗಿ ಮಂಗಳವಾರ ನೇಮಕ ಮಾಡಲಾಗಿದೆ.

‘ಬಿಎಸ್‌ಎಫ್‌ನ ಡಿಜಿಯಾಗಿ ಸೇವೆ ಸಲ್ಲಿಸುತ್ತಿದ್ದ ರಾಕೇಶ್‌ ಅಸ್ತಾನಾ ಅವರು ತತ್‌ಕ್ಷಣವೇ ದೆಹಲಿ ಪೊಲೀಸ್‌ ಕಮಿಷನರ್‌ ಆಗಿ ಅಧಿಕಾರ ಸ್ವೀಕರಿಸುವರು’ ಎಂದು ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ.

ಅವರು ಇದೇ 31ರಂದು ನಿವೃತ್ತರಾಗಲಿದ್ದರು. ಅವರ ಅಧಿಕಾರಾವಧಿ ಒಂದು ವರ್ಷ ಇರಲಿದೆ.

1984 ಬ್ಯಾಚ್‌ನ ಅಧಿಕಾರಿಯಾಗಿರುವ ರಾಕೇಶ್‌ ಅವರು ಸಿಬಿಐನ ವಿಶೇಷ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಆಗ, ಸಿಬಿಐನ ನಿರ್ದೇಶಕರಾಗಿದ್ದ ಅಲೋಕ್‌ ವರ್ಮಾ ಅವರೊಂದಿಗಿನ ಜಟಾಪಟಿ ಚರ್ಚೆಗೆ ಗ್ರಾಸವಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು