ಗುರುವಾರ , ಮಾರ್ಚ್ 23, 2023
29 °C

ಮೋರ್ಬಿ ಸೇತುವೆ ಕುಸಿತ ಪ್ರಕರಣ: ಆರೋಪ ಪಟ್ಟಿ ಸಲ್ಲಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ಅಹಮದಾಬಾದ್: ಮೊರ್ಬಿ ತೂಗು ಸೇತುವೆ ಕುಸಿತ ಅವಘಡದ ಆರೋಪಿ, ಗಡಿಯಾರ ತಯಾರಿಕೆ ಕಂಪನಿ ಒರೆವಾ ಸಮೂಹದ ಮಾಲೀಕ ಜಯ್‌ಸುಖ್‌ ಪಟೇಲ್ ವಿರುದ್ಧ ಪೊಲೀಸರು ದೋಷಾರೋಪ ಪಟ್ಟಿ ದಾಖಲಿಸಿದ್ದಾರೆ.

10 ಮಂದಿ ವಿರುದ್ಧ ಆರೋಪಪಟ್ಟಿ ದಾಖಲಿಸಿದ್ದು, ಪಟೇಲ್‌ರನ್ನು ಮುಖ್ಯ ಆರೋಪಿಯಾಗಿ ಹೆಸರಿಸಲಾಗಿದೆ. ಅಕ್ಟೋಬರ್ 30ರಂದು ನಡೆದಿದ್ದ ಅವಘಡದಲ್ಲಿ 135 ಜನ ಮೃತಪಟ್ಟಿದ್ದು, 50 ಮಂದಿ ಗಾಯಗೊಂಡಿದ್ದರು.

ತೂಗು ಸೇತುವೆ ನಿರ್ವಹಣೆಯಲ್ಲಿ ಅಗತ್ಯ ಕ್ರಮವಹಿಸದೇ ನಿರ್ಲಕ್ಷ್ಯವಹಿಸಿದ ಆರೋಪವಿದೆ ಎಂದು ಮೊರ್ಬಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಾಹುಲ್ ತ್ರಿಪಾಠಿ ತಿಳಿಸಿದ್ದಾರೆ.

ಒಟ್ಟು 1,200 ಪುಟಗಳ ಆರೋಪ ಪಟ್ಟಿಯಲ್ಲಿ ಮೃತರ ವಿವರಗಳು, ವಿಶೇಷ ತನಿಖಾ ತಂಡದ ವರದಿಗಳು ಇವೆ. ಜಯ್‌ಸುಖ್‌ ಪಟೇಲ್‌ ಪ್ರಕರಣದ ಪ್ರಮುಖ ಆರೋಪಿ. ಆದರೆ, ಹಲವು ಬಾರಿ ಸಮನ್ಸ್ ಜಾರಿ ಮಾಡಿದ್ದರೂ ಅವರು ಒಮ್ಮೆಯೂ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು