ಸೋಮವಾರ, ಮೇ 23, 2022
28 °C

ಭಾಷಣ ಮಾಡುವಾಗ ಕುಸಿದು ಬಿದ್ದ ಗುಜರಾತ್ ಸಿಎಂ ವಿಜಯ್‌ ರೂಪಾಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ಗುಜರಾತ್‌ ಮುಖ್ಯಮಂತ್ರಿ ವಿಜಯ್‌ ರೂಪಾನಿ

ವಡೋದರಾ: ಸಾರ್ವಜನಿಕ ಭಾಷಣ ಮಾಡುತ್ತಿದ್ದಾರೆ ಗುಜರಾತ್‌ ಮುಖ್ಯಮಂತ್ರಿ ವಿಜಯ್‌ ರೂಪಾಣಿ ಕುಸಿದು ಬಿದ್ದಿದ್ದಾರೆ.

ವಡೋದರಾದಲ್ಲಿ ಭಾನುವಾರ ಮುಖ್ಯಮಂತ್ರಿ ವಿಜಯ್‌ ರೂಪಾಣಿ ಅವರು ಭಾಷಣ ಮಾಡುವಾಗ ಕುಸಿದು ಬಿದ್ದಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

'ಮುಖ್ಯಮಂತ್ರಿ ಅವರ ಆರೋಗ್ಯ ಸ್ಥಿರವಾಗಿದೆ. ಕುಸಿದು ಬಿದ್ದ ಕೆಲವೇ ನಿಮಿಷಗಳಲ್ಲಿ ಅವರಿಗೆ ಪ್ರಜ್ಞೆ ಬಂದಿದ್ದು, ಕಾರಿನ ವರೆಗೂ ಅವರಾಗಿಯೇ ನಡೆದು ಸಾಗಿದ್ದಾರೆ. ಅಹಮದಾಬಾದ್‌ನ ಯುಎನ್‌ ಮೆಹ್ತಾ ಆಸ್ಪತ್ರೆಗೆ ಆರೋಗ್ಯ ಪರೀಕ್ಷೆಗೆ ಕರೆದುಕೊಂಡು ಹೋಗಲಾಗಿದೆ. ಅವರು ಆರೋಗ್ಯದಿಂದಿದ್ದಾರೆ, ಕುಸಿದು ಬೀಳಲು ಕಾರಣ ಇನ್ನಷ್ಟೇ ತಿಳಿಯಬೇಕಿದೆ' ಎಂದು ಬಿಜೆಪಿ ಮಾಧ್ಯಮ ಸಂಚಾಲಕರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು