Breaking News| ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ದಿಢೀರ್ ರಾಜೀನಾಮೆ
ಗಾಂಧೀನಗರ: ಅಚ್ಚರಿಯ ರಾಜಕೀಯ ಬೆಳವಣಿಗೆಯಲ್ಲಿ, ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಶನಿವಾರ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ಸಂಗತಿಯನ್ನು ಘೋಷಿಸಿದರು. ಯಾವ ಕಾರಣಕ್ಕಾಗಿ ರಾಜೀನಾಮೆ ನೀಡಲಾಗಿದೆ ಎಂಬುದನ್ನು ಅವರು ಬಹಿರಂಗಪಡಿಸಲಿಲ್ಲ.
ಐದು ವರ್ಷಗಳ ಕಾಲ ರಾಜ್ಯದ ಸೇವೆ ಮಾಡಲು ಪಕ್ಷ ನನಗೆ ಅವಕಾಶ ನೀಡಲಾಗಿದೆ. ನನ್ನ ಪಕ್ಷ ಏನು ಹೇಳಿದರೂ ಅದನ್ನು ನಾನು ಮಾಡುತ್ತೇನೆ ಎಂದು ರೂಪಾನಿ ಸುದ್ದಿಗಾರರಿಗೆ ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯವಾದ ಗುಜರಾತ್‌ನಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದೆ
Gujarat Chief Minister Vijay Rupani resigns pic.twitter.com/J8hl8GCHui
— ANI (@ANI) September 11, 2021
65 ವರ್ಷದ ರೂಪಾನಿ ಅವರು 2016ರ ಆಗಸ್ಟ್7ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.