ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿಗೆ ಮುನ್ನಡೆ

Last Updated 5 ಅಕ್ಟೋಬರ್ 2021, 9:02 IST
ಅಕ್ಷರ ಗಾತ್ರ

ಅಹಮದಾಬಾದ್: ಗಾಂಧಿನಗರ ಮುನ್ಸಿಪಲ್ ಕಾರ್ಪೊರೇಷನ್ (ಜಿಎಂಸಿ) ಮತ್ತು ಗುಜರಾತ್‌ನ ಇತರ ಮೂರು ಪುರಸಭೆಗಳ ಚುನಾವಣೆಯ ಮತ ಎಣಿಕೆ ಮಂಗಳವಾರ ನಡೆಯುತ್ತಿದ್ದು, ಆರಂಭಿಕ ಹಂತದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಗಾಂಧಿನಗರ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಆಡಳಿತಾರೂಢ ಬಿಜೆಪಿಯು ಒಟ್ಟು 44 ಸ್ಥಾನಗಳಲ್ಲಿ 16 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್‌ ಒಂದು ಸ್ಥಾನದಲ್ಲಿ ಗೆಲುವು ದಾಖಲಿಸಿದೆ ಎಂದು ಚುನಾವಣಾ ಅಧಿಕಾರಿಗಳು ಹೇಳಿದ್ದಾರೆ.

ಓಖಾದ 36 ಸ್ಥಾನಗಳಲ್ಲಿ 28, ಭಾನವಾಡದ 24ರಲ್ಲಿ ಮೂರು, ಥರಾ ಪುರಸಭೆಯ 24ರಲ್ಲಿ 20 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಜಿಎಂಸಿ ಮತ್ತು ಇತರ ಮೂರು ಪುರಸಭೆಗಳಿಗೆ ಭಾನುವಾರ ಮತದಾನ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT