ಶನಿವಾರ, ಮಾರ್ಚ್ 6, 2021
28 °C

ಗುಜರಾತ್ ಪಾಲಿಕೆ ಚುನಾವಣೆ ಗೆಲುವು ಅತಿ ವಿಶೇಷ: ಪ್ರಧಾನಿ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಗುಜರಾತ್‌ನ ಆರು ಮಹಾನಗರ ಪಾಲಿಕೆಗಳಲ್ಲಿ ಬಿಜೆಪಿ ಅಧಿಕಾರಕ್ಕೇರಲು ಸಜ್ಜಾಗಿದ್ದು, ಈ ಗೆಲುವನ್ನು ಪ್ರಧಾನಿ ನರೇಂದ್ರ ಮೋದಿ ಅತಿ ವಿಶೇಷವಾದುದು ಎಂದು ಕೊಂಡಾಡಿದ್ದಾರೆ.

ಎರಡು ದಶಕಕ್ಕಿಂತಲೂ ಹೆಚ್ಚು ಸಮಯದಿಂದ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಬಿಜೆಪಿ ಪಕ್ಷವು ಗಮನಾರ್ಹ ಸಾಧನೆ ಮಾಡಿದೆ ಎಂದವರು ತಿಳಿಸಿದರು.

ಗುಜರಾತ್ ಪಾಲಿಕೆ ಚುನಾವಣೆಯ ಫಲಿತಾಂಶದಲ್ಲಿ ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ರಾಜಕೀಯದಲ್ಲಿ ಜನರು ಹೊಂದಿರುವ ನಂಬಿಕೆಯು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: 

ಬಿಜೆಪಿ ಮೇಲೆ ನಂಬಿಕೆಯನ್ನಿರಿಸಿದ ರಾಜ್ಯದ ಜನತೆಗೆ ಕೃತಜ್ಞನಾಗಿದ್ದೇನೆ. ಗುಜರಾತ್ ಜನರಿಗಾಗಿ ಸೇವೆ ಸಲ್ಲಿಸುವುದು ಯಾವತ್ತೂ ಹೆಮ್ಮೆಯ ವಿಚಾರ ಎಂದು ತಿಳಿಸಿದರು.

 

 

 

ಈ ಗೆಲುವು ಅತಿ ವಿಶೇಷವಾಗಿದೆ. ಎರಡು ದಶಕಗಳಿಂದ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಬಿಜೆಪಿ ಪಕ್ಷವು ಇಂತಹ ಅದ್ಭುತ ಗೆಲುವು ದಾಖಲಿಸಿರುವುದು ಗಮನಾರ್ಹ ಸಾಧನೆಯಾಗಿದೆ. ಸಮಾಜದ ಎಲ್ಲ ವರ್ಗದವರಿಂದಲೂ ವಿಶೇಷವಾಗಿ ಯುವ ಜನತೆಯಿಂದ ಬಿಜೆಪಿಗೆ ಬೆಂಬಲ ದೊರೆತಿರುವುದು ನಿಜಕ್ಕೂ ಹೃದಯಸ್ಪರ್ಶಿಯಾಗಿದೆ ಎಂದು ಹೇಳಿದರು.

 

ಗುಜರಾತ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ 474 ಸ್ಥಾನಗಳ ಪೈಕಿ ಬಿಜೆಪಿ ಸಂಜೆಯ ವೇಳೆಗೆ 409ರಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಆರು ಮಹಾನಗರ ಪಾಲಿಕೆಗಳಲ್ಲಿ ಅಧಿಕಾರವನ್ನು ಉಳಿಸಿಕೊಂಡಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು