ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಮೋದಿ, ನಡ್ಡಾ, ರೂಪಾನಿಗೆ ಧನ್ಯವಾದ ಹೇಳಿದ ಗುಜರಾತ್‌ ನೂತನ ಸಿಎಂ

Last Updated 12 ಸೆಪ್ಟೆಂಬರ್ 2021, 14:33 IST
ಅಕ್ಷರ ಗಾತ್ರ

ಗಾಂಧೀನಗರ: ಗುಜರಾತ್‌ನ ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಮಾಜಿ ಮುಖ್ಯಮಂತ್ರಿ ವಿಜಯ್‌ ರೂಪಾನಿ ಅವರಿಗೆ ಧನ್ಯವಾದ ಹೇಳಿದ್ದಾರೆ. ರಾಜ್ಯವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುವ ಭರವಸೆ ನೀಡಿದ್ದಾರೆ.

ಮುಖ್ಯಮಂತ್ರಿ ಹೆಸರು ಘೋಷಣೆಯಾದ ಬಳಿಕ ಮೊದಲ ಸಲ ಮಾಧ್ಯಮದವರೊಂದಿಗೆ ಮಾತನಾಡಿದ ಭೂಪೇಂದ್ರ,ʼಮೊದಲಿಗೆ, ಪ್ರಧಾನಿ ನರೇಂದ್ರ ಮೋದಿ, ಜೆಪಿ ನಡ್ಡಾ ಮತ್ತು ಅಮಿತ್‌ ಶಾ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ. ಹಾಗೆಯೇ ರಾಜ್ಯ ಬಿಜೆಪಿ ನಾಯಕರಾದ ಸಿ.ಆರ್‌. ಪಾಟೀಲ್‌ ಮತ್ತು ವಿಜಯ್‌ ರೂಪಾನಿ ಅವರ ತಂಡಕ್ಕೂ ಧನ್ಯವಾದ ಹೇಳುತ್ತೇನೆʼ ಎಂದು ತಿಳಿಸಿದ್ದಾರೆ.

ಹಾಗೆಯೇ, ʼಪಕ್ಷವು ನನ್ನ ಮೇಲೆ ತೋರಿರುವನಂಬಿಕೆಯನ್ನು ಹುಸಿಯಾಗಲು ಬಿಡುವುದಿಲ್ಲ. ರಾಜ್ಯದಲ್ಲಿ ಅರ್ಧಕ್ಕೆ ನಿಂತಿರುವ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸುವತ್ತೇನೆ. ಸಂಘಟನೆಯನ್ನು ಉಳಿಸಿಕೊಂಡು ಮುನ್ನಡೆಯುತ್ತೇವೆʼ ಎಂದಿದ್ದಾರೆ.

ಇದಕ್ಕೂ ಮೊದಲು ಮಾತನಾಡಿದ ರಾಜ್ಯ ಬಿಜೆಪಿ ಮುಖ್ಯಸ್ಥ ಸಿ.ಆರ್‌. ಪಾಟೀಲ್‌ ಅವರು ಭೂಪೇಂದ್ರ ಪಟೇಲ್‌ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ʼಭೂಪೇಂದ್ರ ಪಟೇಲ್‌ ಅವರೊಂದಿಗೆ ಯಾರೊಬ್ಬರೂ ಪ್ರಮಾಣ ಸ್ವೀಕರಿಸುವುದಿಲ್ಲ.ಉಪ ಮುಖ್ಯಮಂತ್ರಿಯನ್ನು ಇನ್ನೂ ನಿರ್ಧರಿಸಿಲ್ಲʼ ಎಂದು ಅವರು ಮಾಹಿತಿ ನೀಡಿದ್ದಾರೆ.

ಭೂಪೇಂದ್ರ ಅವರು ಘಾಟ್‌ಲೋಡಿಯಾ ಕ್ಷೇತ್ರದಿಂದ ಇದೇ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇದಕ್ಕೂ ಮೊದಲು ಈ ಕ್ಷೇತ್ರವನ್ನು ಆನಂದಿಬೆನ್‌ ಪಟೇಲ್‌ ಪ್ರತಿನಿಧಿಸುತ್ತಿದ್ದರು.‌ ಆನಂದಿಬೆನ್‌ ಸದ್ಯ ಉತ್ತರ ಪ್ರದೇಶದ ರಾಜ್ಯಪಾಲರಾಗಿ ಮತ್ತು ಮಧ್ಯಪ್ರದೇಶದ ಹೆಚ್ಚುವರಿ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT