ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌| ಎರಡು ದಿನದಲ್ಲಿ ಕಾಂಗ್ರೆಸ್‌ ತೊರೆದ ಮೂವರು ಶಾಸಕರು

Last Updated 10 ನವೆಂಬರ್ 2022, 5:29 IST
ಅಕ್ಷರ ಗಾತ್ರ

ಅಹಮದಾಬಾದ್‌: ವಿಧಾನಸಭೆ ಚುನಾವಣೆ ನಡುವೆಯೇ ಗುಜರಾತ್‌ನ ದಾಹೋದ್ ಜಿಲ್ಲೆಯ ಜಲೋದ್‌ ಕ್ಷೇತ್ರದ ಕಾಂಗ್ರೆಸ್ ಶಾಸಕ ಭವೇಶ್ ಕತಾರಾ ಅವರು ಗುರುವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್‌ನ ಮೋಹನ್‌ಸಿನ್ಹ್ ರಾಥ್ವಾ ಮತ್ತು ಭಗವಾನ್ ಬರಾದ್ ಈ ಹಿಂದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಕತಾರಾ ಅವರು ಬುಧವಾರ ರಾತ್ರಿ ವಿಧಾನಸಭಾಧ್ಯಕ್ಷ ನಿಮಾಬೆನ್ ಆಚಾರ್ಯ ಅವರ ನಿವಾಸಕ್ಕೆ ತೆರಳಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಕತಾರಾ ರಾಜೀನಾಮೆಯೊಂದಿಗೆ ಎರಡು ದಿನದಲ್ಲಿ ಮೂವರು ಶಾಸಕರು ಕಾಂಗ್ರೆಸ್‌ ತೊರೆದಂತಾಗಿದೆ.

ಬಿಜೆಪಿಯು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುತ್ತಿರುವ ಹೊತ್ತಿನಲ್ಲೇ ಕತಾರಾ ಅವರೂ ರಾಜೀನಾಮೆ ನೀಡಿದ್ದಾರೆ. ಬಹುತೇಕ ಗುರುವಾರ ಅವರು ಬಿಜೆಪಿ ಸೇರುವ ಸಾಧ್ಯತೆ ಇದೆ.

ಈ ಹಿಂದೆ, ರಾಥ್ವಾ ಮತ್ತು ಬರಾದ್ ಕೂಡ ಕಾಂಗ್ರೆಸ್ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು.

ಗುಜರಾತ್‌ ವಿಧಾನಸಭೆಗೆ ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT