ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್ ಉಪಮುಖ್ಯಮಂತ್ರಿ ನಿತಿನ್ ಪಟೇಲ್‌ಗೆ ಕೋವಿಡ್ ಪಾಸಿಟಿವ್

Last Updated 25 ಏಪ್ರಿಲ್ 2021, 3:15 IST
ಅಕ್ಷರ ಗಾತ್ರ

ಅಹಮದಾಬಾದ್: ತಮಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿರುವುದಾಗಿ ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಶನಿವಾರ ಮಾಹಿತಿ ನೀಡಿದ್ದಾರೆ.

ಆರೋಗ್ಯ ಖಾತೆಯನ್ನೂ ಹೊಂದಿರುವ 64 ವರ್ಷದ ಪಟೇಲ್ ಅವರು, ಕೋವಿಡ್-19 ದೃಢಪಟ್ಟ ನಂತರ ಯು.ಎನ್. ಮೆಹ್ತಾ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಅಂಡ್ ರಿಸರ್ಚ್ ಸೆಂಟರ್‌ಗೆದಾಖಲಾಗಿದ್ದಾರೆ.

ಕೊರೊನಾ ವೈರಸ್‌ನ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡ ನಂತರ ನಾನು ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿಕೊಂಡಿದ್ದು, ವರದಿ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆಯ ಮೇರೆಗೆ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದೇನೆ' ಎಂದು ಪಟೇಲ್ ಅವರು ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗೆ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ನಿತಿನ್ ಪಟೇಲ್ ಅವರು ಮನವಿ ಮಾಡಿದ್ದಾರೆ.

ಹಿಂದಿನ ದಿನ ಅವರು ಗಾಂಧಿನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು, ಇದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮುಖ್ಯಮಂತ್ರಿ ವಿಜಯ್ ರೂಪಾನಿ ಭಾಗವಹಿಸಿದ್ದರು. ಅವರು ಶುಕ್ರವಾರ ಶಾ ಮತ್ತು ರೂಪಾನಿ ಅವರೊಂದಿಗೆ ಇದ್ದರು.

ಪಟೇಲ್ ಅವರು ಒಂದು ತಿಂಗಳ ಹಿಂದೆ ತಮ್ಮ ಮೊದಲ ಕೋವಿಡ್ -19 ಲಸಿಕೆ ಡೋಸ್‌ ಅನ್ನು ಪಡೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT