ಶುಕ್ರವಾರ, ಫೆಬ್ರವರಿ 3, 2023
23 °C

Gujarat Results: ದಲಿತ ನಾಯಕ ಜಿಗ್ನೇಶ್‌ ಮೇವಾನಿಗೆ ಗೆಲುವು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಅಹಮದಾಬಾದ್‌: ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ದಲಿತ ನಾಯಕ ಜಿಗ್ನೇಶ್‌ ಮೇವಾನಿ ಅವರು ವಡಗಾವ್‌ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.

ಮೇವಾನಿ 93,848 ಮತ ಗಳಿಸಿಕೊಂಡಿದ್ದಾರೆ. ಅವರ ಸಮೀಪದ ಸ್ಪರ್ಧಿ ಎಂ.ಜೆ. ವಘೇಲಾ 89,052 ಪಡೆದು ಅಲ್ಪ ಅಂತರದಿಂದ ಸೋಲು ಕಂಡಿದ್ದಾರೆ.

ಈ ಗೆಲುವು ನನ್ನ ಜವಾಬ್ದಾರಿಯನ್ನು ಹೆಚ್ಚು ಮಾಡಿದೆ ಎಂದು ಮೇವಾನಿ ಟ್ವೀಟ್ ಮಾಡಿದ್ದಾರೆ.

'ನನ್ನ ಪರವಾಗಿ ಜನಾದೇಶ ನೀಡಿದ್ದಕ್ಕಾಗಿ ವಡಗಾವ್‌ ಜನರಿಗೆ ಧನ್ಯವಾದ ಹೇಳುತ್ತೇನೆ. ಈ ಗೆಲುವು ಮತದಾರರು ನನ್ನ ಮೇಲೆ ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸವನ್ನು ತೋರಿಸುತ್ತದೆ. ಇದು ಸಮಾಜದ ಬಡ ಮತ್ತು ಕೆಳ ವರ್ಗದ ಜನರ ಬಗೆಗಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ' ಎಂದು ತಿಳಿಸಿದ್ದಾರೆ.

ಕಳೆದ (2017ರ) ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮೇವಾನಿ ಅವರಿಗೆ ಕಾಂಗ್ರೆಸ್‌ ಬೆಂಬಲ ನೀಡಿತ್ತು. ಅವರನ್ನು ಬೆಂಬಲಿಸುವ ಸಲುವಾಗಿ ಈ ಕ್ಷೇತ್ರದಿಂದ ಸ್ಪರ್ಧಿಸಿರಲಿಲ್ಲ.

ವಡಗಾವ್‌ ಎಸ್‌ಸಿ ಮೀಸಲು ಕ್ಷೇತ್ರವಾಗಿದ್ದು, ಮುಸ್ಲಿಂ ಮತದಾರರು ಫಲಿತಾಂಶದ ನಿರ್ಣಯದಲ್ಲಿ ಪ್ರಧಾನ ಪಾತ್ರ ವಹಿಸುತ್ತಾರೆ. ಇಲ್ಲಿ ಒಟ್ಟು 2.94 ಲಕ್ಷ ಮತದಾರರಿದ್ದು, ಈ ಪೈಕಿ ಮುಸ್ಲಿಂ ಮತದಾರರ ಸಂಖ್ಯೆ 90 ಸಾವಿರದಷ್ಟಿದೆ.

LIVE | ವಿಧಾನಸಭೆ ಚುನಾವಣೆ ಫಲಿತಾಂಶ: ಗುಜರಾತ್‌ನಲ್ಲಿ 150ರ ಗಡಿ ದಾಟಿದ ಬಿಜೆಪಿ

ಸದ್ಯ ಗುಜರಾತ್‌ ವಿಧಾನಸಭೆಯ ಎಲ್ಲ ಕ್ಷೇತ್ರಗಳ ಮತ ಎಣಿಕೆ ಮುಕ್ತಾಯವಾಗಿದೆ. 182 ಕ್ಷೇತ್ರಗಳ ಪೈಕಿ ಬಿಜೆಪಿ 156ರಲ್ಲಿ, ಕಾಂಗ್ರೆಸ್‌ 17 ಕಡೆ ಹಾಗೂ ಎಎಪಿ 5 ಸ್ಥಾನಗಳಲ್ಲಿ ಜಯ ಸಾಧಿಸಿವೆ. ಉಳಿದಂತೆ 4 ಕ್ಷೇತ್ರಗಳು ಇತರರ ಪಾಲಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು