ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್ ಫಲಿತಾಂಶ ನಿರೀಕ್ಷಿತ, ರಾಷ್ಟ್ರದ ಮನಸ್ಥಿತಿ ಬಿಂಬಿಸುವುದಿಲ್ಲ: ಪವಾರ್

Last Updated 8 ಡಿಸೆಂಬರ್ 2022, 8:58 IST
ಅಕ್ಷರ ಗಾತ್ರ

ಮುಂಬೈ: ಗುಜರಾತ್ ವಿಧಾನಸಭೆ ಚುನಾವಣೆ ಫಲಿತಾಂಶವು ನಿರೀಕ್ಷಿತವಾಗಿದ್ದು, ರಾಷ್ಟ್ರದ ಮನಸ್ಥಿತಿಯನ್ನು ಪ್ರತಿಬಿಂಬಿಸುವುದಿಲ್ಲ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಗುರುವಾರ ಹೇಳಿದ್ದಾರೆ.

ಗುಜರಾತ್‌ನಲ್ಲಿ ದಾಖಲೆ ಗೆಲುವಿನೊಂದಿಗೆ ಸತತ ಏಳನೇ ಅವಧಿಗೆ ಬಿಜೆಪಿ ಅಧಿಕಾರ ಹಿಡಿಯುವುದು ಬಹುತೇಕ ಖಚಿತವೆನಿಸಿದೆ.

ಚುನಾವಣಾ ಆಯೋಗದ ಮಾಹಿತಿ ಪ್ರಕಾರ 182 ಸದಸ್ಯ ಬಲದ ಗುಜರಾತ್‌ನಲ್ಲಿ ಬಿಜೆಪಿ 22 ಸ್ಥಾನಗಳಲ್ಲಿ ಗೆಲುವು ದಾಖಲಿಸಿದ್ದು, 136ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಕಾಂಗ್ರೆಸ್ 16 ಹಾಗೂ ಆಮ್ ಆದ್ಮಿ ಪಕ್ಷವು 5 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ.

ಗುಜರಾತ್ ವಿಧಾನಸಭೆ ಚುನಾವಣೆ ಫಲಿತಾಂಶ ನಿರೀಕ್ಷಿತವಾಗಿದೆ. ಇದಕ್ಕಾಗಿ ಇಡೀ ಆಡಳಿತ ಯಂತ್ರವನ್ನು ಉಪಯೋಗಿಸಲಾಗಿದೆ. ಅನೇಕ ಯೋಜನೆಗಳನ್ನು ರಾಜ್ಯದ ಪರ ಘೋಷಿಸಲಾಗಿದೆ ಎಂದು ಶರದ್ ಪವಾರ್ ಹೇಳಿದರು.

ಗುಜರಾತ್ ಫಲಿತಾಂಶ ದೇಶದ ಮನಸ್ಥಿತಿಯನ್ನು ಪ್ರತಿಬಿಂಬಿಸುವುದಿಲ್ಲ. ಬಿಜೆಪಿಯನ್ನು ಸೋಲಿಸಿರುವ ದೆಹಲಿ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯ ಫಲಿತಾಂಶಗಳೇ ಇದನ್ನು ಸಾಬೀತುಪಡಿಸುತ್ತವೆ ಎಂದು ಹೇಳಿದರು.

ಇದನ್ನೂ ಓದಿ:



ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT