ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್ ಚುನಾವಣೆ: ಇಂದು ಪ್ರಧಾನಿ ಮೋದಿ, ಕೇಜ್ರಿವಾಲ್ ಪ್ರಚಾರ ಸಭೆ

ಗುಜರಾತ್‌ನಲ್ಲಿ ಮೊದಲ ಹಂತದ ಚುನಾವಣೆ ಡಿ. 1ರಂದು ನಡೆಯಲಿದೆ.
Last Updated 27 ನವೆಂಬರ್ 2022, 5:38 IST
ಅಕ್ಷರ ಗಾತ್ರ

ಅಹಮದಾಬಾದ್: ಗುಜರಾತ್ ಚುನಾವಣೆಗೆ ಭರದ ಸಿದ್ಧತೆ ನಡೆದಿದ್ದು, ಡಿಸೆಂಬರ್ 1ರಂದು ಮೊದಲ ಹಂತದ ಮತದಾನ ನಡೆಯಲಿದೆ.

ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಗುಜರಾತ್‌ನ ಸೂರತ್‌ನಲ್ಲಿ ಇಂದು ರೋಡ್‌ ಶೋ ಮತ್ತು ಪ್ರಚಾರ ಸಭೆಗಳನ್ನು ನಡೆಸಲಿದ್ದಾರೆ.

182 ಸದಸ್ಯಬಲದ ಗುಜರಾತ್ ವಿಧಾನಸಭೆಗೆ ಸೂರತ್‌ನಿಂದ 12 ಮಂದಿ ಶಾಸಕರು ಆಯ್ಕೆಯಾಗುತ್ತಾರೆ. ಹೀಗಾಗಿ ಈ ಕ್ಷೇತ್ರದ ಬಗ್ಗೆ ರಾಜಕೀಯ ಪಕ್ಷಗಳು ಹೆಚ್ಚಿನ ಆಸಕ್ತಿ ಹೊಂದಿವೆ.

ಪ್ರಧಾನಿ ಮೋದಿ, ಸೂರತ್‌ನಲ್ಲಿ ಇಂದು ಏರ್‌ಪೋರ್ಟ್‌ನಿಂದ ಮೋಟಾ ವರಚ್ಚಾ ಪ್ರದೇಶಕ್ಕೆ 25 ಕಿ.ಮೀ. ದೂರದವರೆಗೆ ರೋಡ್ ಶೋ ನಡೆಸಲಿದ್ದಾರೆ. ನಂತರ, ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳುವರು.

ಅರವಿಂದ ಕೇಜ್ರಿವಾಕ್ ಅವರು ಎರಡು ದಿನಗಳ ಕಾಲ ಸೂರತ್‌ನಲ್ಲಿದ್ದು, ವಸ್ತ್ರ ಉದ್ಯಮದ ಪ್ರಮುಖರ ಜತೆ ಚರ್ಚಿಸಲಿದ್ದಾರೆ. ಅಲ್ಲದೆ, ಕತರ್‌ಗಾಮ್‌ನಲ್ಲಿ ರೋಡ್ ಶೋ ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT