ಶನಿವಾರ, ಆಗಸ್ಟ್ 13, 2022
26 °C

ಗುಜರಾತ್: ಮಕ್ಕಳ ಆಸ್ಪತ್ರೆ ಇರುವ ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ, 70 ಜನರ ರಕ್ಷಣೆ

ಪಿಟಿಐ Updated:

ಅಕ್ಷರ ಗಾತ್ರ : | |

ಅಹಮದಾಬಾದ್‌: ಮಕ್ಕಳ ಆಸ್ಪತ್ರೆಯನ್ನು ಹೊಂದಿರುವ ಅಹಮದಾಬಾದ್‌ನ ಬಹುಮಹಡಿ ವಾಣಿಜ್ಯ ಸಂಕೀರ್ಣವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮಕ್ಕಳೂ ಸೇರಿದಂತೆ ಒಟ್ಟು 70 ಜನರನ್ನು ರಕ್ಷಿಸಲಾಗಿದೆ ಎಂದು ಅಗ್ನಿಶಾಮಕ ದಳ ಅಧಿಕಾರಿಗಳು ತಿಳಿಸಿದ್ದಾರೆ.

ಇಲ್ಲಿನ ಪರಿಮಳ ಗಾರ್ಡನ್‌ಗೆ ಸಮೀಪದಲ್ಲಿರುವ ದೇವ್‌ ವಾಣಿಜ್ಯ ಸಂಕೀರ್ಣದಲ್ಲಿ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು, ಆವರಣದಲ್ಲಿ ದಟ್ಟ ಹೊಗೆ ಆವರಿಸಿದೆ.

'ನವಜಾತ ಶಿಶು ತೀವ್ರ ನಿಗಾ ಘಟಕದಲ್ಲಿ (ಎನ್‌ಐಸಿಯು) ದಾಖಲಾಗಿದ್ದ ಮೂರು ಶಿಶುಗಳು, ಹತ್ತು ಮಕ್ಕಳು ಸೇರಿದಂತೆ, ಒಟ್ಟು 70 ಜನರನ್ನು ರಕ್ಷಿಸಿ, ಸ್ಥಳಾಂತರಿಸಲಾಗಿದೆ' ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರೋಗಿಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು