ಅಹಮದಾಬಾದ್: ಗುಜರಾತ್ನ ಭಾವನಗರದಲ್ಲಿ ಬುಧವಾರ ಬೆಳಿಗ್ಗೆ ಕೋವಿಡ್ ಆರೈಕೆ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಅಲ್ಲಿದ್ದ 61 ರೋಗಿಗಳನ್ನು ಸ್ಥಳಾಂತರಿಸಲಾಯಿತು.

ಬೆಂಕಿ ಆಕಸ್ಮಿಕ ಸಂಭವಿಸಿದಾಗ ಕೇಂದ್ರದಲ್ಲಿ 68 ರೋಗಿಗಳಿದ್ದರು. ಉಳಿದ 7 ಮಂದಿಯನ್ನು ಶೀಘ್ರವೇ ಸ್ಥಳಾಂತರಿಸಲಾಗುವುದು. ಘಟನೆಯಲ್ಲಿ ಯಾರಿಗೂ ಏನೂ ತೊಂದರೆ ಆಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೋಟೆಲ್ ಒಂದನ್ನು ಕೋವಿಡ್ ಆರೈಕೆ ಕೇಂದ್ರವಾಗಿ ಪರಿವರ್ತಿಸಲಾಗಿತ್ತು. ಬೆಂಕಿ ಆಕಸ್ಮಿಕ ಸಣ್ಣ ಪ್ರಮಾಣದ್ದಾಗಿತ್ತು. ಮಧ್ಯರಾತ್ರಿ ವೇಳೆ ಟಿವಿ ಯೊಂದರಲ್ಲಿ ಕಿಡಿ ಕಾಣಿಸಿಕೊಂಡು ಬೆಂಕಿ ಹತ್ತಿಕೊಂಡಿತು. ದಟ್ಟ ಹೊಗೆ ಆವರಿಸಿತ್ತು. ಆದರೆ ತಕ್ಷಣ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು ಎಂದು ಭಾವನಗರದ ಹಿರಿಯ ಅಗ್ನಿಶಾಮಕ ಅಧಿಕಾರಿ ಭರತ್ ಕಾನಡೆ ತಿಳಿಸಿದರು.

ರಾಜ್ಯದ ಭರೂಚ್ನಲ್ಲಿ ಮೇ 1ರಂದು ಸಂಭವಿಸಿದ ಅಗ್ನಿ ಅವಘಡದಲ್ಲಿ 16 ಮಂದಿ ಕೋವಿಡ್ ರೋಗಿಗಳು ಮೃತಪಟ್ಟಿದ್ದರು. ಆಸ್ಪತ್ರೆಗಳ ಸುರಕ್ಷತೆ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಕ್ಕೆ ಗುಜರಾತ್ ಹೈಕೋರ್ಟ್ ಮಂಗಳವಾರ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೂ ತೆಗೆದುಕೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.