ಶುಕ್ರವಾರ, ಅಕ್ಟೋಬರ್ 29, 2021
20 °C

ಗಾಂಧಿನಗರ ಪಾಲಿಕೆ ಫಲಿತಾಂಶ: 39 ಸ್ಥಾನಗಳಲ್ಲಿ ಬಿಜೆಪಿ, 2 ಸ್ಥಾನದಲ್ಲಿ ಕಾಂಗ್ರೆಸ್

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷದ ಲಾಂಛನಗಳು

ಅಹಮದಾಬಾದ್‌: ಮಂಗಳವಾರ ಗುಜರಾತ್‌ನ ಗಾಂಧಿನಗರ ಮಹಾನಗರ ಪಾಲಿಕೆಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ 39 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್‌ ಎರಡು ಸ್ಥಾನಗಳು ಹಾಗೂ ಎಎಪಿ ಕೇವಲ ಒಂದು ಸ್ಥಾನದಲ್ಲಿ ಗೆಲುವು ಪಡೆದಿವೆ. 

ಅಕ್ಟೋಬರ್‌ 4ರಂದು ಗಾಂಧಿನಗರ ಪಾಲಿಕೆಯ 44 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಬಿಜೆಪಿ ಮತ್ತು ಕಾಂಗ್ರೆಸ್‌ನ ತಲಾ 44 ಅಭ್ಯರ್ಥಿಗಳು, ಎಎಪಿಯಿಂದ 40 ಅಭ್ಯರ್ಥಿಗಳು ಸೇರಿದಂತೆ ಒಟ್ಟು 161 ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಈಗಾಗಲೇ 42 ಸ್ಥಾನಗಳ ಫಲಿತಾಂಶ ಹೊರ ಬಂದಿದೆ. 

ಗುಜರಾತ್‌ ಬಿಜೆಪಿ ಸರ್ಕಾರದಲ್ಲಿ ಕೆಲವು ಬದಲಾವಣೆಗಳು ಆದ ನಂತರ ನಡೆದಿರುವ ಮೊದಲ ಚುನಾವಣೆ ಇದಾಗಿದ್ದು, 2022ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಾಲಿಕೆ ಫಲಿತಾಂಶ ಮಹತ್ವ ಪಡೆದಿದೆ.

2016ರ ಗಾಂಧಿನಗರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ತಲಾ 16 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದವು. ಆಗ ಒಟ್ಟು 32 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಉಭಯ ಪಕ್ಷಗಳು ಅಧಿಕಾರದ ಚುಕ್ಕಾಣಿ ಹಿಡಿಯಲು ಪೈಪೋಟಿ ನಡೆಸಿದ್ದವು, ಆದರೆ, ಕಾಂಗ್ರೆಸ್‌ನ ಕಾರ್ಪೊರೇಟರ್‌ ಪ್ರವೀಣ್‌ ಪಟೇಲ್‌ ಬಿಜೆಪಿಗೆ ಬೆಂಬಲ ನೀಡುವ ಮೂಲಕ ಅಧಿಕಾರ ಸ್ಥಾಪಿಸುವಲ್ಲಿ ಸಹಕಾರ ನೀಡಿದ್ದರು.

ಈ ವರ್ಷ ಏಪ್ರಿಲ್‌ನಲ್ಲಿ ನಡೆಯಬೇಕಿದ್ದ ಪಾಲಿಕೆ ಚುನಾವಣೆಯು ಕೋವಿಡ್‌–19 ಕಾರಣಗಳಿಂದಾಗಿ ಮುಂದೂಡಲಾಗಿತ್ತು. ರಾಜ್ಯದ ಮುಖ್ಯಮಂತ್ರಿ ಮತ್ತು ಸಂಪುಟದ ಬದಲಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಗೆ ಈ ಚುನಾವಣೆಯು ಪರೀಕ್ಷೆಯಂತಾಗಿದೆ. ಇದೇ ವರ್ಷ ಫೆಬ್ರುವರಿಯಲ್ಲಿ ನಡೆದಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಭಾರೀ ಗೆಲುವು ದಾಖಲಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು