ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌: ಕೊಳವೆ ಬಾವಿಗೆ ಬಿದ್ದ ಬಾಲಕಿ ರಕ್ಷಣೆ

Last Updated 29 ಜುಲೈ 2022, 11:50 IST
ಅಕ್ಷರ ಗಾತ್ರ

ಸುರೇಂದ್ರನಗರ, ಗುಜರಾತ್‌: ಕೊಳವೆ ಬಾವಿಯಲ್ಲಿ ಬಿದ್ದ12 ವರ್ಷದ ಬಾಲಕಿಯನ್ನು ಸತತ ಐದು ತಾಸು ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ಸುರೇಂದ್ರನಗರ ಜಿಲ್ಲೆಯ ಧ್ರಾಂಗಧ್ರಾ ತಾಲ್ಲೂಕಿನ ಗಜನ್ವವ್‌ ಗ್ರಾಮದಲ್ಲಿ ಘಟನೆ ನಡೆದಿದೆ.ಕೊಳವೆ ಬಾವಿಗೆ ಬಿದ್ದ ಬಾಲಕಿಯನ್ನು ಮನಿಶಾ ಎಂದು ಗುರುತಿಸಲಾಗಿದೆ. ಬೆಳಿಗ್ಗೆ 7:30ರ ಸುಮಾರಿಗೆ ಮನಿಶಾ500ರಿಂದ 700 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದು, ಸ್ಥಳೀಯ ಆರೋಗ್ಯ ಮತ್ತು ಪೊಲೀಸ್‌ ಇಲಾಖೆ ನೆರವಿನೊಂದಿಗೆ ಸೇನೆಯು ಸತತ ಐದು ತಾಸು ಕಾರ್ಯಾಚರಣೆ ನಡೆಸಿ ಬಾಲಕಿಯನ್ನು ಸುರಕ್ಷಿತವಾಗಿ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ. ಬಾಲಕಿಯು ಕೊಳವೆ ಬಾವಿಯ 60 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದಳು ಎಂದು ಅವರು ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆ ವೇಳೆ ಬಾಲಕಿಗೆ ಆಮ್ಲಜನಕ ಸರಬರಾಜು ಮಾಡಲಾಗಿತ್ತು. ಸದ್ಯ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT