ಬುಧವಾರ, ಸೆಪ್ಟೆಂಬರ್ 22, 2021
28 °C

ಕೋವಿಡ್‌ನಿಂದ ಒಬ್ಬ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ₹2000 ಸಹಾಯಧನ

ಪಿಟಿಐ Updated:

ಅಕ್ಷರ ಗಾತ್ರ : | |

ಅಹಮದಾಬಾದ್: ಕೋವಿಡ್–19 ರೋಗದಿಂದ ಕನಿಷ್ಠ ಒಬ್ಬ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳು ₹2000 ಸಹಾಯಧನವನ್ನು ನೀಡುವುದಾಗಿ ಗುಜರಾತ್ ಸರ್ಕಾರ ಘೋಷಿಸಿದೆ.

ಈಗಾಗಲೇ ಕೋವಿಡ್‌ನಿಂದಾಗಿ ತಂದೆ ಮತ್ತು ತಾಯಿಯನ್ನು ಕಳೆದುಕೊಂಡಿರುವ ಮಕ್ಕಳಿಗೆ ಪ್ರತಿ ತಿಂಗಳು ₹4000 ರೂಪಾಯಿ ಸಹಾಯಧನವನ್ನು 18 ವರ್ಷದವರೆಗೆ ಒದಗಿಸುವ ‘ಮುಖ್ಯಮಂತ್ರಿ ಬಾಲ ಸೇವಾ ಯೋಜನೆ‘ಗೆ ಪೂರಕವಾಗಿ ಈ ಯೋಜನೆ ಘೋಷಿಸಲಾಗಿದೆ. ₹2000 ಸಹಾಯಧನ ಕೂಡ ಅರ್ಹ ಮಕ್ಕಳಿಗೆ 18 ವರ್ಷದವರೆಗೆ ನೀಡಲಾಗುತ್ತದೆ.

ಈ ವಿಷಯವಾಗಿ ಗುಜರಾತ್ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುನೈನಾ ತೋಮರ್ ಅವರು ಎಲ್ಲ ಜಿಲ್ಲಾಧಿಕಾರಿಗಳಿಗೆ ಆದೇಶ ಪತ್ರವನ್ನು ಹೊರಡಿಸಿದ್ದು, ಸಂತ್ರಸ್ತ ಮಕ್ಕಳನ್ನು ಗುರುತಿಸಿ ಅವರ ಬ್ಯಾಂಕ್ ಖಾತೆಗಳನ್ನು ತೆರೆಯುವಂತೆ ಸೂಚಿಸಿದ್ದಾರೆ. ಈ ಯೋಜನೆಯ ಪ್ರಕಾರ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಆಗಲಿದೆ.

ಆಗಸ್ಟ್ 2 ರಂದು ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಮುಖ್ಯಮಂತ್ರಿ ಬಾಲ ಸೇವಾ ಯೋಜನೆಗೆ ಚಾಲನೆ ನೀಡಲಿದ್ದಾರೆ. ಗುಜರಾತ್‌ನಲ್ಲಿ ಇದುವರೆಗೆ 726 ಮಕ್ಕಳು ತಮ್ಮ ತಂದೆ ಮತ್ತು ತಾಯಿಯನ್ನು ಕೋವಿಡ್‌ನಿಂದಾಗಿ ಕಳೆದುಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು