ಭಾನುವಾರ, ಜೂನ್ 20, 2021
25 °C

ತೌತೆ ಚಂಡಮಾರುತ: ಮೃತರ ಕುಟುಂಬಕ್ಕೆ ಗುಜರಾತ್ ಸರ್ಕಾರ ತಲಾ ₹4 ಲಕ್ಷ ಪರಿಹಾರ

ಪಿಟಿಐ Updated:

ಅಕ್ಷರ ಗಾತ್ರ : | |

PTI Photo

ಅಹಮದಾಬಾದ್: ತೌತೆ ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಬಲಿಯಾದವರ ಕುಟುಂಬಕ್ಕೆ ತಲಾ ₹4 ಲಕ್ಷ ಪರಿಹಾರ ನೀಡುವುದಾಗಿ ಗುಜರಾತ್ ಸರ್ಕಾರ ಹೇಳಿದೆ.

ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಈ ಬಗ್ಗೆ ಹೇಳಿಕೆ ಪ್ರಕಟಿಸಿದ್ದು, ಚಂಡಮಾರುತದ ಸಂದರ್ಭ ಗಾಯಗೊಂಡವರಿಗೆ ತಲಾ ₹50,000 ನೀಡುವುದಾಗಿ ಹೇಳಿದ್ದಾರೆ.

ಈಗಾಗಲೇ ಕೇಂದ್ರ ಸರ್ಕಾರ ತೌತೆ ಚಂಡಮಾರುತದ ಸಂದರ್ಭ ಸಾವನ್ನಪ್ಪಿದವರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ್ದು, ಗಾಯಗೊಂಡವರಿಗೆ ₹50,000 ದೊರೆಯಲಿದೆ.

ಗುಜರಾತ್ ಸರ್ಕಾರದ ವರದಿ ಪ್ರಕಾರ 45 ಜನರು ಜೀವ ಕಳೆದುಕೊಂಡಿದ್ದಾರೆ. ಅಲ್ಲದೆ, 16,000ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ. ಜತೆಗೆ 40,000ಕ್ಕೂ ಅಧಿಕ ಮರಗಳು ಧರೆಗುರುಳಿದ್ದು, 70,000ಕ್ಕೂ ಅಧಿಕ ವಿದ್ಯುತ್ ಕಂಬಗಳು ಮುರಿದುಬಿದ್ದಿವೆ. 5,951 ಹಳ್ಳಿಗಳಲ್ಲಿ ಇನ್ನೂ ವಿದ್ಯುತ್ ಸಂಪರ್ಕ ವ್ಯವಸ್ಥೆ ಸರಿಯಾಗಿಲ್ಲ ಎಂದು ಸರ್ಕಾರ ತಿಳಿಸಿದೆ.

ಗುಜರಾತ್‌ನಲ್ಲಿ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ವೈಮಾನಿಕ ಸಮೀಕ್ಷೆ ನಡೆಸಿದ್ದು, ತುರ್ತು ಪುನರ್ವಸತಿ ವ್ಯವಸ್ಥೆ ಕಲ್ಪಿಸಲು ₹1,000 ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು