ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌ನಲ್ಲಿ ಬಿಜೆಪಿಗೆ ಮುನ್ನಡೆ, ಹಿಮಾಚಲದಲ್ಲಿ ತೀವ್ರ ಪೈಪೋಟಿ

Last Updated 8 ಡಿಸೆಂಬರ್ 2022, 3:56 IST
ಅಕ್ಷರ ಗಾತ್ರ

ಗುಜರಾತ್‌, ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ಮತ ಎಣಿಕೆ ಪ್ರಾರಂಭಗೊಂಡಿದ್ದು, ನಿರೀಕ್ಷೆಯಂತೆ ಗುಜರಾತಿನಲ್ಲಿ ಆಡಳಿತಾರೂಢ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ. ಪ್ರಾಥಮಿಕ ಸುತ್ತಿನ ಮತ ಎಣಿಕೆಯಲ್ಲಿ(9 ಗಂಟೆವರೆಗೆ) ಗುಜರಾತ್‌ನ 182 ಸ್ಥಾನಗಳ ಪೈಕಿ ಬಿಜೆಪಿ 131 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್‌ 42 ರಲ್ಲಿ, ಆಮ್‌ ಆದ್ಮಿ 5 ಕ್ಷೇತ್ರಗಳಲ್ಲಿ ಗೆಲುವಿನ ನಿರೀಕ್ಷೆಯಲ್ಲಿವೆ.


ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ತೀವ್ರ ಹಣಾಹಣಿ. 68 ಕ್ಷೇತ್ರಗಳಲ್ಲಿ ಬಿಜೆಪಿ 31, ಕಾಂಗ್ರೆಸ್‌ 35 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.


ಗುಜರಾತ್‌ ಸಿಎಂ ಭೂಪೇಂದ್ರ ಪಟೇಲ್‌, ಹಿಮಾಚಲ ಸಿಎಂ ಜೈರಾಂ ಠಾಕೂರ್‌ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿಹಾರ್ದಿಕ್‌ ಪಟೇಲ್‌ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್‌ನ ಜಿಗ್ನೇಶ್‌ ಮೇವಾನಿ ಹಿನ್ನಡೆ ಅನುಭವಿಸಿದ್ದಾರೆ. ಬಿಜೆಪಿ ಅಲ್ಪೇಶ್‌ ಠಾಕೂರ್‌ ಮುನ್ನಡೆ ಸಾಧಿಸಿದ್ದಾರೆ. ಆಮ್‌ ಆದ್ಮಿಯ ಇಸುದಾನ್‌ ಗಾದ್ವಿ ಮುನ್ನಡೆಯಲ್ಲಿದ್ದಾರೆ. ಹಿಮಾಚಲದಲ್ಲಿ ಕಾಂಗ್ರೆಸ್‌ ರೋಹಿತ್‌ ಠಾಕೂರ್‌ ಮುನ್ನಡೆ ಸಾಧಿಸಿದ್ದಾರೆ.

ಉತ್ತರಪ್ರದೇಶದ ರಾಂಪುರ್ ಸದರ್ ಮತ್ತು ಖತೌಲಿ, ಒಡಿಶಾದ ಪದಂಪುರ, ರಾಜಸ್ಥಾನದ ಸರ್ದಾರ್ ಶಹರ್, ಬಿಹಾರದ ಕುರ್ಹಾನಿ ಮತ್ತು ಛತ್ತೀಸಗಢದ ಭಾನುಪ್ರತಾಪ್‌ಪುರ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭಗೊಂಡಿದೆ. ಮೈನ್‌ಪುರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಸಮಾಜವಾದಿ ಪಕ್ಷದ ನಡುವೆ ತೀವ್ರ ಪೈಪೋಟಿ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT