ಭಾನುವಾರ, ಮೇ 9, 2021
26 °C

ಗುಜರಾತ್: ಪೊಲೀಸ್ ಠಾಣೆ ಆವರಣದಲ್ಲಿ ಮಾನವ ಅಸ್ಥಿಪಂಜರ ಪತ್ತೆ

ಪಿಟಿಐ Updated:

ಅಕ್ಷರ ಗಾತ್ರ : | |

ಅಸ್ಥಿಪಂಜರ-ಪ್ರಾತಿನಿಧಿಕ ಚಿತ್ರ

ಸೂರತ್: ಇಲ್ಲಿನ ಖತೋದರಾ ಪೊಲೀಸ್‌ ಠಾಣೆಯ ಆವರಣದಲ್ಲಿ ಮಾನವ ಅಸ್ಥಿಪಂಜರ ಪತ್ತೆಯಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಆವರಣದಲ್ಲಿದ್ದ ವಾಹನಗಳನ್ನು ಕ್ರೇನ್‌ ನೆರವಿನಿಂದ ತೆಗೆಯುತ್ತಿದ್ದಾಗ ಅಸ್ಥಿಪಂಜರದ ಅವಶೇಷಗಳು ಗೋಚರಿಸಿವೆ. ಅವಶೇಷಗಳು ತಲೆಬುರುಡೆ ಮತ್ತು ಅಸ್ಥಿಪಂಜರದ ಕೆಳಗಿನ ಭಾಗಗಳನ್ನು ಒಳಗೊಂಡಿವೆ’ ಎಂದು ಪೊಲೀಸರು ಅಂದಾಜಿಸಿದ್ದಾರೆ.

ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ತಜ್ಞರ ತಂಡ ಇದನ್ನು ಪರಿಶೀಲಿಸುತ್ತಿದ್ದು, ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಎರಡು ವರ್ಷಗಳ ಬಳಿಕ ಠಾಣೆ ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿತ್ತು ಎಂದು ಅವರು ಇದೇ ವೇಳೆ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು