ಶನಿವಾರ, ಮೇ 15, 2021
24 °C

ಗುಜರಾತ್‌: ಐಐಎಂನಲ್ಲಿ 40 ಮಂದಿಗೆ ಕೋವಿಡ್ ಪಾಸಿಟಿವ್

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಅಹಮದಾಬಾದ್‌: ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ನ (ಐಐಎಂ) ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಸೇರಿದಂತೆ 40 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಗಾಂಧಿನಗರದ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಲ್ಲಿ 25 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿರುವುದು ಖಚಿತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅಹಮದಾಬಾದ್‌ ಮುನ್ಸಿಪಲ್ ಕಾರ್ಪೋರೇಷನ್ ಉಪ ಆರೋಗ್ಯ ಅಧಿಕಾರಿ ಮೆಹುಲ್ ಆಚಾರ್ಯ, ಕೊರೊನಾ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಸೇರಿದಂತೆ 40 ಜನರಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರೆಲ್ಲರನ್ನು ಪ್ರತ್ಯೇಕ ವಾಸದಲ್ಲಿರಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: 

ಐಐಟಿ ಬಗ್ಗೆ ಮಾಹಿತಿ ನೀಡಿರುವ ಐಐಎಂಎ ಅಧಿಕಾರಿ, ಪ್ರಸ್ತುತ ಕ್ಯಾಂಪಸ್‌ನಲ್ಲಿ 25 ಮಂದಿ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಆಗಿರುವುದು ದೃಢಪಟ್ಟಿದೆ ಎಂದು ಹೇಳಿದ್ದಾರೆ.

ಯಾರಲ್ಲೂ ರೋಗ ಲಕ್ಷಣ ಕಾಣಿಸಿಕೊಂಡಿಲ್ಲ. ಅಲ್ಲದೆ ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷವೇ ಶೈಕ್ಷಣಿಕ ಚುಟುವಟಿಕೆಗಳನ್ನು ಆನ್‌ಲೈನ್‌ಗೆ ವರ್ಗಾಯಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಕ್ಯಾಂಪಸ್‌ನಲ್ಲಿ ಪ್ರವೇಶ ಹಾಗೂ ನಿರ್ಗಮನವನ್ನು ನಿರ್ಬಂಧಿಸಲಾಗಿದೆ. ಎಲ್ಲ ವಿದ್ಯಾರ್ಥಿಗಳಿಗೆ ಮುನ್ನಚ್ಚೆರಿಕಾ ಮಾರ್ಗಸೂಚಿಗಳನ್ನು ನಿಯಮಿತವಾಗಿ ಹಂಚಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು