ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ: ಬಿಜೆಪಿ ಹಿಡಿತದಲ್ಲಿ ಪಂಚಾಯಿತಿಗಳು!

ಅಹಮದಾಬಾದ್: ಗುಜರಾತ್ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಮಂಗಳವಾರ ನಡೆಯುತ್ತಿದೆ. 81 ಪುರಸಭೆಗಳು, 31 ಜಿಲ್ಲಾ ಪಂಚಾಯಿತಿಗಳು ಹಾಗೂ 231 ತಾಲ್ಲೂಕು ಪಂಚಾಯಿತಿಗಳ ಸ್ಥಾನಗಳಿಗೆ ಭಾನುವಾರ ಮತದಾನ ನಡೆದಿತ್ತು.
ಬಿಜೆಪಿ 73 ತಾಲ್ಲೂಕು ಪಂಚಾಯಿತಿ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 11 ಹಾಗೂ ಇತರೆ ಪಕ್ಷಗಳು 3 ಸ್ಥಾನಗಳಲ್ಲಿ ಮುಂದಿವೆ. ಜಿಲ್ಲಾ ಪಂಚಾಯಿತಿಯಲ್ಲಿ ಬಿಜೆಪಿ 30 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
60 ಪುರಸಭೆ ಸ್ಥಾನಗಳಲ್ಲಿ ಬಿಜೆಪಿ, 6 ಸ್ಥಾನಗಳಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ. ಗ್ರಾಮೀಣ ಪ್ರದೇಶಗಳಲ್ಲಿ 24 ಎಎಪಿ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದಾಗಿ ಎಎಪಿ ಟ್ವೀಟಿಸಿದೆ.
Good news coming in from Gujarat!
24 AAP candidates have been officially declared winners from various rural areas.
AAP leading in many more seats.
The revolution which started in urban Gujarat, continues in the rural polls.#GujaratLocalBodyElection
— AAP (@AamAadmiParty) March 2, 2021
ಪುರಸಭೆಗಳಲ್ಲಿ ಶೇ 58.82, ಜಿಲ್ಲಾ ಪಂಚಾಯಿತಿಗಳಿಗೆ ಶೇ 65.80 ಹಾಗೂ ತಾಲ್ಲೂಕು ಪಂಚಾಯಿತಿಗಳಿಗೆ ಶೇ 66.60ರಷ್ಟು ಮತದಾನ ದಾಖಲಾಗಿತ್ತು.
ಒಟ್ಟು 8,474 ಸ್ಥಾನಗಳ ಪೈಕಿ 8,235 ಸ್ಥಾನಗಳಿಗೆ ಚುನಾವಣೆ ನಡೆದಿದೆ. 237 ಸ್ಥಾನಗಳಲ್ಲಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದರೆ, ಎರಡು ಸ್ಥಾನಗಳಲ್ಲಿ ನಾಮಪತ್ರಗಳು ಸಲ್ಲಿಕೆಯಾಗಿರಲಿಲ್ಲ. 8,235 ಸ್ಥಾನಗಳ ಪೈಕಿ ಬಿಜೆಪಿ 8,161 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ 7,778 ಸ್ಥಾನಗಳು, ಆಮ್ ಆದ್ಮಿ ಪಾರ್ಟಿ (ಎಎಪಿ) 2,090 ಸ್ಥಾನಗಳಲ್ಲಿ ಸ್ಪರ್ಧಿಸಿವೆ.
ಭಾನುವಾರ ಮತದಾನದ ಬಳಿಕ ಇವಿಎಂಗಳನ್ನು ವಶಕ್ಕೆ ಪಡೆದಿದ್ದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸೋಮವಾರ ವಡೋದರಾದಲ್ಲಿ 17 ಜನರನ್ನು ಬಂಧಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.