ಶುಕ್ರವಾರ, ಜುಲೈ 1, 2022
25 °C

ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಪ್ರಕರಣ: ಶಾಸಕ ಜಿಗ್ನೇಶ್ ಮೇವಾನಿಗೆ ಜಾಮೀನು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುವಾಹಟಿ: ಗುಜರಾತ್‌ ಶಾಸಕ ಜಿಗ್ನೇಶ್‌ ಮೇವಾನಿಗೆ ಅಸ್ಸಾಂನ ಬರ್ಪೆಟಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ ಜಾಮೀನು ನೀಡಿದೆ. 

ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇವಾನಿ ಅವರನ್ನು ಕಳೆದ ವಾರ ಬಂಧಿಸಲಾಗಿತ್ತು.

ಪ್ರಧಾನಿ ವಿರುದ್ಧದ ಟ್ವೀಟ್‌ ಪ್ರಕರಣದಲ್ಲಿ ಜಾಮೀನು ಪಡೆದು ಬಿಡುಗಡೆಗೊಂಡ ಬೆನ್ನಲ್ಲೇ ಜಿಗ್ನೇಶ್‌ ಅವರನ್ನು ಬರ್ಪೆಟಾ ಪೊಲೀಸರು ಬಂಧಿಸಿದ್ದರು. 

ಗುವಾಹಟಿ ವಿಮಾನ ನಿಲ್ದಾಣದಿಂದ ಜಿಗ್ನೇಶ್ ಅವರನ್ನು ಕೋಕ್ರಜಾರ್‌ಗೆ ಕರೆತರುವಾಗ ಪೊಲೀಸರ ತಂಡದಲ್ಲಿದ್ದ ಮಹಿಳಾ ಅಧಿಕಾರಿಯ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಕುರಿತು ಆರೋಪ ಕೇಳಿಬಂದಿತ್ತು.

ಐಪಿಸಿ ಸೆಕ್ಷನ್‌ 294 (ಸಾರ್ವಜನಿಕವಾಗಿ ಅಶ್ಲೀಲ ಪದಗಳ ಬಳಕೆ), 323 (ಸ್ವಯಂಪ್ರೇರಣೆಯಿಂದ ನೋವುಂಟು ಮಾಡುವುದು), 353 (ಕರ್ತವ್ಯನಿರತ ಸರ್ಕಾರಿ ಅಧಿಕಾರಿಯ ಮೇಲೆ ಹಲ್ಲೆ) ಹಾಗೂ 354ರ ಅಡಿಯಲ್ಲಿ ಜಿಗ್ನೇಶ್‌ ವಿರುದ್ಧ ಪ್ರಕರಣ ದಾಖಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು