ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೂರತ್: ₹ 25.80 ಕೋಟಿ ನಕಲಿ ನೋಟು ವಶ

Last Updated 30 ಸೆಪ್ಟೆಂಬರ್ 2022, 14:40 IST
ಅಕ್ಷರ ಗಾತ್ರ

ಸೂರತ್: ₹25.80 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳನ್ನು ಗುಜರಾತ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನೋಟಿನ ಮೇಲೆ ರಿವರ್ಸ್ ಬ್ಯಾಂಕ್ ಆಫ್ ಇಂಡಿಯಾ ಎಂದು ಮುದ್ರಿಸಲಾಗಿದ್ದು, ಸಿನಿಮಾ ಚಿತ್ರೀಕರಣಕ್ಕೆ ಕೊಂಡೊಯ್ಯಲಾಗುತ್ತಿತ್ತು ಎಂದು ತಿಳಿದುಬಂದಿದೆ.

ಬೋಗಸ್ ನೋಟುಗಳನ್ನು ಆ್ಯಂಬುಲೆನ್ಸ್‌ ಮೂಲಕ ಮುಂಬೈಗೆ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಕಮ್ರೇಜ್ ಪೊಲೀಸ್ ಠಾಣೆ ವ್ಯಾಪ್ತಿಯ ಚೆಕ್ ಪಾಯಿಂಟ್‌ನಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ 6 ಬ್ಯಾಗುಗಳಲ್ಲಿದ್ದ ₹2,000 ಮುಖಬೆಲೆಯ ಕಂತೆ ಕಂತೆ ನಕಲಿ ನೋಟುಗಳು ಪತ್ತೆಯಾಗಿವೆ ಎಂದು ಎಸ್‌ಪಿ ಹಿತೇಶ್ ಜೋಯ್ಸರ್ ಹೇಳಿದ್ದಾರೆ. ನೋಟುಗಳ ಮೇಲೆ ರಿವರ್ಸ್ ಬ್ಯಾಂಕ್ ಆಫ್ ಇಂಡಿಯಾ ಎಂದು ಬರೆಯಲಾಗಿತ್ತು.

ಆದರೆ, ಇಷ್ಟೊಂದು ದೊಡ್ಡ ಪ್ರಮಾಣದ ನೋಟುಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ತನಿಖೆಗೆ ತಂಡವನ್ನು ರಚಿಸಲಾಗಿದೆ. ಆರ್‌ಬಿಐ ಮಾರ್ಗಸೂಚಿಗಳ ಅನ್ವಯ ಪ್ರಕರಣ ದಾಖಲಿಸಬೇಕೆ? ಎಂಬ ಕುರಿತು ಪೊಲೀಸರು ತನಿಖೆನಡೆಸುತ್ತಿದ್ದಾರೆ.

ಪ್ರಕರಣ ಕುರಿತಂತೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ಈ ಕುರಿತಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ವಿಧಿ ವಿಜ್ಞಾನ ತಜ್ಞರ ನೆರವು ಕೋರಿರುವ ಅಧಿಕಾರಿಗಳು ಭಾರತದ ನಕಲಿ ನೋಟುಗಳ ಮಾಹಿತಿ ವ್ಯವಸ್ಥೆ(ಎಫ್‌ಐಸಿಎನ್) ಅಡಿ ಪರಿಗಣೆಸಬೇಕೆ ಎಂಬ ಕುರಿತಂತೆ ಪರಿಶೀಲನೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT