ಶನಿವಾರ, ಸೆಪ್ಟೆಂಬರ್ 25, 2021
30 °C

ಗುಜರಾತ್: ಗುರುವಾರ ನೂತನ ಸಚಿವರ ಪ್ರಮಾಣವಚನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಅಹಮದಾಬಾದ್: ‘ಗುಜರಾತ್‌ನಲ್ಲಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ನೇತೃತ್ವದ ಸರ್ಕಾರದ ಹೊಸ ಸಚಿವರು ಗುರುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ’ ಎಂದು ರಾಜ್ಯ ಬಿಜೆಪಿ ವಕ್ತಾರ ಯಮಲ್ ವ್ಯಾಸ್ ತಿಳಿಸಿದ್ದಾರೆ.

‘ಹೊಸ ಸಚಿವರ ಹೆಸರನ್ನು ಇನ್ನೂ ಘೋಷಿಸಲಾಗಿಲ್ಲವಾದರೂ, ಪ್ರಮಾಣವಚನ ಸ್ವೀಕಾರ ಸಮಾರಂಭ ಗುರುವಾರ ಮಧ್ಯಾಹ್ನ 1.30ಕ್ಕೆ ಗಾಂಧಿನಗರದಲ್ಲಿ ನಡೆಯಲಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಹಿಂದೆ ಬುಧವಾರ ಹೊಸ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಪಕ್ಷ ಘೋಷಿಸಿತ್ತು. ಆದರೆ, ಸಮಾರಂಭ ಗುರುವಾರಕ್ಕೆ ಮುಂದೂಡಲಾಗಿದೆ ಎಂದು ರಾಜ್ಯಪಾಲರ ಕಚೇರಿಯ ಮೂಲಗಳು ದೃಢಪಡಿಸಿವೆ.

ಯಾವ ಕಾರಣಕ್ಕಾಗಿ ಪ್ರಮಾಣವಚನ ಸ್ವೀಕಾರ ಸಮಾರಂಭ ಮುಂದೂಡಲಾಗಿದೆ ಎನ್ನುವ ಕುರಿತು ಬಿಜೆಪಿಯಾಗಲೀ, ರಾಜ್ಯ ಸರ್ಕಾರವಾಗಲೀ ಮಾಹಿತಿ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು