ಅಹಮದಾಬಾದ್: ಏಕಕಾಲಕ್ಕೆ ಗುಜರಾತ್‌ನ 17 ಜೈಲುಗಳಲ್ಲಿ ಪೊಲೀಸರು ರಾತ್ರಿ ಶೋಧ ಕಾರ್ಯಾಚರಣೆ ನಡೆಸಿ ಕೈದಿಗಳಿಂದ ಮೊಬೈಲ್, ಮಾರಕಾಸ್ತ್ರಗಳು ಸೇರಿದಂತೆ ಮಾದಕ ವಸ್ತಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಜೈಲಿನಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆಯೇ ಎಂದು ಪರಿಶೀಲಿಸಲು ಮತ್ತು ಕಾನೂನಾತ್ಮಕವಾಗಿ ಕೈದಿಗಳು ಅರ್ಹವಾದ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆಯೇ ಎನ್ನುವುದನ್ನು ಖಚಿತಪಡಿಸಿಕೊಳ್ಳಲು 1,700 ಪೊಲೀಸ್ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದರು.
ಈ ವೇಳೆ 16 ಮೊಬೈಲ್, 10 ಎಲೆಕ್ಟ್ರಾನಿಕ್ ವಸ್ತುಗಳು, 39 ಮಾರಕಾಸ್ತ್ರಗಳು, ಮೂರು ಮಾದಕ ವಸ್ತುಗಳು ಮತ್ತು 519 ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.