ಸೋಮವಾರ, ಮಾರ್ಚ್ 27, 2023
31 °C

2024ರಲ್ಲೂ ಪ್ರಧಾನಿಯಾಗಿ ನರೇಂದ್ರ ಮೋದಿ ಆಯ್ಕೆ: ಅಮಿತ್ ಶಾ

ಪಿಟಿಐ Updated:

ಅಕ್ಷರ ಗಾತ್ರ : | |

ಗಾಂಧಿನಗರ: ಗುಜರಾತ್ ವಿಧಾನಸಭೆ ಚುನಾವಣಾ ಫಲಿತಾಂಶವು 2024ರಲ್ಲೂ ಪ್ರಧಾನಿಯಾಗಿ ನರೇಂದ್ರ ಮೋದಿ ಆಯ್ಕೆಯಾಗಲಿದ್ದಾರೆ ಎಂಬ ಸ್ಪಷ್ಟ ಸಂದೇಶವನ್ನು ನೀಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ.

ಗುಜರಾತ್ ಮಾತ್ರವಲ್ಲದೆ ಇಡೀ ದೇಶಕ್ಕೆ ಈ ಚುನಾವಣೆಯು ಮುಖ್ಯವೆನಿಸಿತ್ತು. ಏಕೆಂದರೆ 2024ರ ಲೋಕಸಬಾ ಚುನಾವಣೆಯಲ್ಲಿ ಮೋದಿ ಅವರನ್ನು ಪ್ರಧಾನಿಯಾಗಿ ಆಯ್ಕೆ ಮಾಡಲು ಇಡೀ ದೇಶವೇ ಸಜ್ಜಾಗಿದೆ ಎಂದು ಹೇಳಿದರು.

ಇದನ್ನೂ ಓದಿ: 

ಗಾಂಧಿನಗರದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.

ಗುಜರಾತ್ ಮತ್ತು ನರೇಂದ್ರ ಮೋದಿ ಅವರನ್ನು ಅವಮಾನಿಸಲು ಯತ್ನಿಸಿದವರಿಗೆ ಗುಜರಾತ್ ಜನತೆ ತಕ್ಕೆ ಉತ್ತರವನ್ನೇ ನೀಡಿದ್ದಾರೆ. ಗುಜರಾತ್ ಚುನಾವಣಾ ಫಲಿತಾಂಶವು ಕಾಶ್ಮೀರದಿಂದ ಕನ್ಯಾಕುಮಾರಿ (ಉತ್ತರದಿಂದ ದಕ್ಷಿಣ), ದ್ವಾರಕಾದಿಂದ ಕಾಮಾಕ್ಯಕ್ಕೆ (ಪಶ್ಚಿಮದಿಂದ ಪೂರ್ವ) ಸ್ಪಷ್ಟ ಸಂದೇಶ ರವಾನಿಸಿದೆ ಎಂದು ಹೇಳಿದರು.

ಬಿಜೆಪಿ ಸರ್ಕಾರ ಮಾಡಿರುವ ಅಭಿವೃದ್ಧಿಗಳ ಬಗ್ಗೆ ಹೆಚ್ಚು ವಿವರಿಸುವ ಅಗತ್ಯವಿಲ್ಲ. ಚುನಾವಣೆಯಲ್ಲಿ ಜನರೇ ತೀರ್ಪು ನೀಡಿದ್ದಾರೆ ಎಂದು ಹೇಳಿದರು.

ಗುಜರಾತ್‌ನಲ್ಲಿ ಸತತ ಏಳನೇ ಬಾರಿಗೆ ಬಿಜೆಪಿ ಗೆಲುವು ದಾಖಲಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು