ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌ನಲ್ಲಿ ಬಿಜೆಪಿ ಸ್ಥಾನ ಭದ್ರ: ಸಿ–ವೋಟರ್

Last Updated 2 ಅಕ್ಟೋಬರ್ 2022, 21:31 IST
ಅಕ್ಷರ ಗಾತ್ರ

ನವದೆಹಲಿ: ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭೆಗಳಿಗೆ ವರ್ಷಾಂತ್ಯದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಸುಲಭವಾಗಿ ಅಧಿಕಾರ ಹಿಡಿಯಲಿದೆ ಎಂದು ಸಿ–ವೋಟರ್ ಸಮೀಕ್ಷೆ ಅಭಿಪ್ರಾಯಪಟ್ಟಿದೆ. ಈ ಎರಡೂ ಚುನಾವಣೆಗಳಲ್ಲಿ ಕಾಂಗ್ರೆಸ್‌ನ ಮತ ಪ್ರಮಾಣ ಇನ್ನಷ್ಟು ಕುಸಿಯಲಿದ್ದು, ಎಎಪಿಯಿಂದ ದೊಡ್ಡ ಬದಲಾವಣೆ ಸಾಧ್ಯವಾಗುವುದಿಲ್ಲ ಎಂದು ಸಮೀಕ್ಷೆ ತಿಳಿಸಿದೆ.

182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ ಬಿಜೆಪಿ ತನ್ನ ಸಂಖ್ಯಾ ಬಲವನ್ನು ಈಗಿರುವ 99ರಿಂದ 135–143ಕ್ಕೆ ಹೆಚ್ಚಿಸಿಕೊಳ್ಳುವ ಸಾಧ್ಯತೆಯಿದೆ. ಈಗ 77 ಸದಸ್ಯರನ್ನು ಹೊಂದಿರುವ ಕಾಂಗ್ರೆಸ್‌ ಬಲ 36–44ಕ್ಕೆ ಕುಸಿಯಲಿದೆ. ಎಎಪಿಯು ಗುಜರಾತ್‌ ಚುನಾವಣೆಗೆ ಹೆಚ್ಚಿನ ಒತ್ತು ನೀಡುತ್ತಿದೆ. ಆದರೂ, ಎರಡಕ್ಕಿಂತ ಹೆಚ್ಚು ಸ್ಥಾನ ಸಿಗುವುದಿಲ್ಲ ಎಂದು ಸಮೀಕ್ಷೆ ಅಭಿಪ್ರಾಯಪಟ್ಟಿದೆ.

ಆದಾಗ್ಯೂ, ಎಎಪಿ ಶೇ 17.4ರಷ್ಟು ಮತಗಳನ್ನು ಪಡೆಯುವ ಸಾಧ್ಯತೆಯಿದೆ.ಬಿಜೆಪಿ ಹಾಗೂ ಕಾಂಗ್ರೆಸ್‌ ಗಳೆರಡರ ಸ್ವಲ್ಪ ಮತಗಳು ಎಎಪಿಗೆ ಸಿಗಲಿವೆ. ಶೇ 41.4ರಷ್ಟು ಮತಗಳನ್ನು ಪಡೆದಿದ್ದ ಕಾಂಗ್ರೆಸ್ ಈ ಬಾರಿ 32.3ರಷ್ಟು ಮತಗಳಿಗೆ ತೃಪ್ತಿಪಟ್ಟುಕೊಳ್ಳಲಿದೆ. ಕಳೆದ ಚುನಾವಣೆಯಲ್ಲಿ ಶೇ 49.1ರಷ್ಟು ಮತ ಪ್ರಮಾಣ ಗಳಿಸಿದ್ದ ಬಿಜೆಪಿಗೆ, ಬರುವ ಚುನಾವಣೆಯಲ್ಲಿ ಶೇ 46.4ರಷ್ಟು ಮತಗಳು ಸಿಗುವ ಸಾಧ್ಯತೆಗಳಿವೆ.

68 ಸದಸ್ಯಬಲದ ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿಯು 37ರಿಂದ 45 ಸೀಟುಗಳನ್ನು ಪಡೆಯುವ ಸಾಧ್ಯತೆಯಿದೆ. ಕಾಂಗ್ರೆಸ್‌ಗೆ 21–29 ಸ್ಥಾನ ಸಿಗಬಹುದು. ಎಎಪಿ ಒಂದೂ ಸ್ಥಾನ ಗಳಿಸದಿದ್ದರೂ, ಶೇ 9.5ರಷ್ಟು ಮತಗಳನ್ನು ಪಡೆಯುವ ಸಾಧ್ಯತೆಯಿದೆ ಎಂದು ಸಮೀಕ್ಷೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT