ಖಂಬಾಲಿಯಾ:ಗುಜರಾತ್ ವಿಧಾನಸಭೆ ಚುನಾವಣೆ ವೇಳೆ ಆಮ್ ಆದ್ಮಿ ಪಕ್ಷವು (ಎಎಪಿ) ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದ ಈಸುದಾನ್ ಗಢವಿ ಅವರು 18 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.

77,305 ಮತಗಳನ್ನು ಪಡೆದ ಬಿಜೆಪಿಯ ಮುಲುಭಾಯ್ ಬೆರಾ ಅವರು ಇಲ್ಲಿ ಗೆಲುವು ಸಾಧಿಸಿದ್ದಾರೆ. ಈಸುದಾನ್ ಅವರು58,467 ಮತ ಗಳಿಸಿ ಎರಡನೇ ಸ್ಥಾನ ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಶಾಸಕಿ ವಿಕ್ರಂಭಾಯಿ ಮಾದಂ44,526 ಮತ ಗಳಿಸಿ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.

ಟಿವಿ ನ್ಯೂಸ್ ಚಾನಲ್ವೊಂದರ ನಿರೂಪಕರಾಗಿದ್ದ ಗಢವಿ, ಖಂಬಾಲಿಯಾದಲ್ಲಿಯೇ ಹುಟ್ಟಿ ಬೆಳೆದವರು.

ಈ ಕ್ಷೇತ್ರದಲ್ಲಿ ಬಿಜೆಪಿ 2007 ಮತ್ತು 2012ರಲ್ಲಿ ಜಯ ಸಾಧಿಸಿತ್ತು. ಆದರೆ, 2014ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಮತ್ತು ಕಳೆದ (2017ರ) ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಪಡೆದಿತ್ತು. ಇದೀಗ ಮತ್ತೆ ಬಿಜೆಪಿ ವಿಜಯದ ನಗೆ ಬೀರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.