ಸೋಮವಾರ, ಡಿಸೆಂಬರ್ 5, 2022
19 °C

Gujarat Polls: ಏಳು ನಾಯಕರನ್ನು ಅಮಾನತುಗೊಳಿಸಿದ ಬಿಜೆಪಿ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಅಹಮದಾಬಾದ್: ಅಶಿಸ್ತಿನ ವರ್ತನೆಗೆ ಸಂಬಂಧಿಸಿದಂತೆ ಏಳು ನಾಯಕರನ್ನು ಗುಜರಾತ್‌ನ ಬಿಜೆಪಿ ಅಮಾನತುಗೊಳಿಸಿದೆ.

ಗುಜರಾತ್ ವಿಧಾನಸಭೆ ಚುನಾವಣೆಗೆ ಕೇವಲ ಎರಡು ವಾರಗಳಿರುವಂತೆಯೇ ಈ ಬೆಳವಣಿಗೆ ನಡೆದಿದೆ.

ಇಬ್ಬರು ಮಾಜಿ ಶಾಸಕರು ಸೇರಿದಂತೆ ಏಳು ಮಂದಿ ನಾಯಕರು ಪಕ್ಷದ ಸೂಚನೆಯನ್ನು ಉಲ್ಲಂಘಿಸಿ ಡಿಸೆಂಬರ್ 1ರಂದು ನಡೆಯಲಿರುವ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: 

ಬಂಡಾಯವೆದ್ದ ನಾಯಕರಲ್ಲಿ ಹರ್ಷದ್ ವಾಸವ, ಅರವಿಂದ ಲಡಾನಿ, ಛತ್ರಸಿನ್ಹ ಗುಂಜಾರ, ಕೇತನ್, ಭರತ್ ಚಾವ್ಡಾ, ಉದಯ್ ಶಾ ಮತ್ತು ಕರಣ್ ಭರಯ್ಯ ಸೇರಿದ್ದಾರೆ.

ಗುಜರಾತ್ ಬಿಜೆಪಿ ಅಧ್ಯಕ್ಷ ಸಿ.ಆರ್. ಪಾಟೀಲ್ ಸೂಚನೆ ಮೇರೆಗೆ ನಾಯಕರನ್ನು ಅಮಾನತು ಮಾಡಲಾಗಿದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.

ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ಬಿಜೆಪಿಯಲ್ಲಿ ಅತೃಪ್ತ ನಾಯಕರಿಂದ ಅಸಮಾಧಾನ ಹೊಗೆಯಾಡುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು