ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್ ಚುನಾವಣೆ: ಸೋಮನಾಥ ದೇವಾಲಯಕ್ಕೆ ಇಂದು ಪ್ರಧಾನಿ ಮೋದಿ ಭೇಟಿ 

Last Updated 20 ನವೆಂಬರ್ 2022, 4:47 IST
ಅಕ್ಷರ ಗಾತ್ರ

ಅಹಮದಾಬಾದ್ (ಗುಜರಾತ್): ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.

ಸೋಮನಾಥ ದೇವಾಲಯದ ಟ್ರಸ್ಟ್‌ನ ಅಧ್ಯಕ್ಷರೂ ಆಗಿರುವ ಮೋದಿಯವರು ಅಲ್ಲಿಗೆಭೇಟಿ ನೀಡುತ್ತಿರುವುದು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಹತ್ವ ಪಡೆದಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಎಂಟು ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.

ಸೋಮನಾಥ ದೇಗುಲಕ್ಕೆ ಭೇಟಿ ನೀಡಿದ ಬಳಿಕ ಅವರು ವೆರಾವಲ್, ಧೋರಾಜಿ, ಅಮ್ರೇಲಿ ಮತ್ತುಬೋಟಾಡ್‌ನಲ್ಲಿ ನಡೆಯಲಿರುವ ಚುನಾವಣಾ ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೋದಿ ಭೇಟಿ ಹಿನ್ನೆಲೆಯಲ್ಲಿ ಪೊಲೀಸ್ ಭದ್ರತೆ ಸೇರಿದಂತೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಏತನ್ಮಧ್ಯೆ, ನ.21 ರಂದು ಮೋದಿ ಅವರು ಸುರೇಂದ್ರನಗರ, ಭರೂಚ್ ಮತ್ತು ನವಸಾರಿಯಲ್ಲಿ ಮೂರು ರ‍್ಯಾಲಿಗಳನ್ನು ನಡೆಸಲಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೌರಾಷ್ಟ್ರದ ಕ್ಷೇತ್ರಗಳಲ್ಲಿ ಬಿಜೆಪಿ ಒಂದೇ ಒಂದು ಸ್ಥಾನವನ್ನು ಗೆಲ್ಲಲು ಸಾಧ್ಯವಾಗಿರಲಿಲ್ಲ. ರಾಜ್ಯದಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತಾದರೂ ಸಾಂಪ್ರದಾಯಿಕವಾಗಿ ಕಾಂಗ್ರೆಸ್‌ ಮತಗಳನ್ನು ಸೆಳೆಯುವಲ್ಲಿ ಹಿಂದೆ ಬಿದ್ದಿತ್ತು.

ನವಸಾರಿಗೆ ರಾಹುಲ್ ಭೇಟಿ?: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನ. 21 ರಂದು (ಸೋಮವಾರ) ನವಸಾರಿಗೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT