ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Gujarat Polls: ಗುಜರಾತ್ ಪ್ರಗತಿಗಾಗಿ ಮತ ಚಲಾಯಿಸಲು ಕೇಜ್ರಿವಾಲ್ ಕರೆ

Last Updated 5 ಡಿಸೆಂಬರ್ 2022, 5:11 IST
ಅಕ್ಷರ ಗಾತ್ರ

ಅಹಮದಾಬಾದ್: ಗುಜರಾತ್ ವಿಧಾನಸಭೆಗೆ ಎರಡನೇ ಹಂತದ ಮತದಾನ ಆರಂಭವಾಗಿದ್ದು, ಮತದಾರರು ಮತಗಟ್ಟೆಗಳಲ್ಲಿ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಈ ಬಾರಿ ಸ್ವಲ್ಪ ವಿಭಿನ್ನವಾಗಿ ಚಿಂತಿಸಿ ಗುಜರಾತ್ ಪ್ರಗತಿಗಾಗಿ ಮತ ಹಾಕುವಂತೆ ಕರೆ ನೀಡಿದ್ದಾರೆ.

ಎರಡನೇ ಹಂತದಲ್ಲಿ ಗುಜರಾತ್‌ನ 93 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಇದು ಗುಜರಾತ್‌ನ ಹೊಸ ಭರವಸೆ ಹಾಗೂ ಆಕಾಂಕ್ಷೆಗಳ ಚುನಾವಣೆಯಾಗಿದೆ. ಇದು ದಶಕಗಳ ನಂತರ ಬಂದಿರೋ ಉತ್ತಮ ಅವಕಾಶ. ಭವಿಷ್ಯದ ದೃಷ್ಟಿಕೋನದಲ್ಲಿ ಗುಜರಾತ್ ಪ್ರಗತಿಗಾಗಿ ಮತ ನೀಡಿ. ಈ ಬಾರಿ ಸ್ವಲ್ಪ ವಿಭಿನ್ನ ಮತ್ತು ಅದ್ಭುತವಾದದ್ದನ್ನು ಮಾಡಿ ಎಂದು ಕೇಜ್ರಿವಾಲ್ ಹೇಳಿದರು.

182 ಸದಸ್ಯ ಬಲದ ಗುಜರಾತ್‌ ವಿಧಾನಸಭೆ ಚುನಾವಣೆಯ ಫಲಿತಾಂಶ ಡಿಸೆಂಬರ್ 8ರಂದು ಪ್ರಕಟಗೊಳ್ಳಲಿದೆ. ಎಎಪಿಯು ಎಲ್ಲ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಡಿ.1ರಂದು 89 ಕ್ಷೇತ್ರಗಳಿಗೆ ನಡೆದಿದ್ದ ಮೊದಲ ಹಂತದ ಚುನಾವಣೆಯಲ್ಲಿ ಶೇ 63.31ರಷ್ಟು ಮತದಾನವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT