ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನಹಾನಿ ಪ್ರಕರಣ: ಸೂರತ್‌ ನ್ಯಾಯಾಲಯಕ್ಕೆ ಹಾಜರಾದ ರಾಹುಲ್ ಗಾಂಧಿ

Last Updated 24 ಜೂನ್ 2021, 7:56 IST
ಅಕ್ಷರ ಗಾತ್ರ

ಸೂರತ್: ಗುಜರಾತ್ ಶಾಸಕರೊಬ್ಬರು ಸಲ್ಲಿಸಿದ್ದ ಕ್ರಿಮಿನಲ್ ಮಾನಹಾನಿ ಮೊಕದ್ದಮೆಗೆ ಸಂಬಂಧಿಸಿದಂತೆ ಅಂತಿಮ ಹೇಳಿಕೆ ದಾಖಲಿಸಲು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಗುರುವಾರ ಸೂರತ್‌ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರಾದರು.

‘ಮೋದಿ ಸರ್‌ನೇಮ್‌’ಗೆ ಸಂಬಂಧಿಸಿದಂತೆ ರಾಹುಲ್‌ ಗಾಂಧಿ ಅವರು ಈ ಹಿಂದೆ ಮಾಡಿದ್ದ ಟೀಕೆಗೆ ಸಂಬಂಧಿಸಿದಂತೆ ಸೂರತ್‌ನ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು 2019ರ ಏಪ್ರಿಲ್‌ನಲ್ಲಿ ರಾಹುಲ್‌ ವಿರುದ್ಧ ಐಪಿಸಿ ಕಲಂ 499 ಮತ್ತು 500ರ ಅಡಿಯಲ್ಲಿ ದೂರು ದಾಖಲಿಸಿದ್ದರು.

ಸೂರತ್‌ನ ಸಿಜೆಎಂ ಎ.ಎನ್‌.ದೇವ್‌ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಅಂತಿಮ ಹೇಳಿಕೆಯನ್ನು ದಾಖಲಿಸಲು ಜೂನ್‌ 24ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್‌ ಗಾಂಧಿ ಅವರಿಗೆ ನಿರ್ದೇಶನ ನೀಡಿದ್ದರು.

2019ರ ಚುನಾವಣಾ ರ್‍ಯಾಲಿಯೊಂದರಲ್ಲಿ ರಾಹುಲ್‌ ಗಾಂಧಿ ಅವರು, ‘ಕಳ್ಳೆರೆಲ್ಲರೂ ಮೋದಿ ಅನ್ನುವ ಸಾಮಾನ್ಯ ಉಪನಾಮವನ್ನೇ ಹೇಗೆ ಹೊಂದಿದ್ದಾರೆ?’ ಎಂದು ಹೇಳುವ ಮೂಲಕ ಇಡೀ ಮೋದಿ ಸಮುದಾಯವನ್ನು ದೂಷಿಸಿದ್ದಾರೆ ಎಂದು ಶಾಸಕರು ತಮ್ಮ ದೂರಿನಲ್ಲಿ ಆರೋಪಿಸಿದ್ದರು.

ಕರ್ನಾಟಕದ ಕೋಲಾರದಲ್ಲಿ 2019ರ ಏಪ್ರಿಲ್‌ 13ರಂದು ನಡೆದ ಚುನಾವಣಾ ರ್‍ಯಾಲಿಯಲ್ಲಿ ರಾಹುಲ್‌ ಗಾಂಧಿ ಅವರು, ‘ನೀರವ್‌ ಮೋದಿ, ಲಲಿತ್‌ ಮೋದಿ, ನರೇಂದ್ರ ಮೋದಿ.... ಅವರೆಲ್ಲರೂ ಮೋದಿ ಉಪನಾಮವನ್ನೇ ಹೇಗೆ ಹೊಂದಿದ್ದಾರೆ? ಎಲ್ಲ ಕಳ್ಳರು ಮೋದಿಯನ್ನು ಸಾಮಾನ್ಯ ಉಪನಾಮವಾಗಿ ಹೇಗೆ ಹೊಂದಿದ್ದಾರೆ?’ ಎಂದಿದ್ದರು. ಆಗ ರಾಹುಲ್‌ ಅವರು ಎಐಸಿಸಿ ಅಧ್ಯಕ್ಷರಾಗಿದ್ದರು.

2019ರ ಅಕ್ಟೋಬರ್‌ನಲ್ಲಿ ಈ ಪ್ರಕರಣ ಕುರಿತು ನ್ಯಾಯಾಲಯಕ್ಕೆ ಹಾಜರಾಗಿದ್ದ ರಾಹುಲ್‌ ಗಾಂಧಿ, ‘ನನ್ನು ಹೇಳಿಕೆ ಮೂಲಕ ತಪ್ಪು ಮಾಡಿದ್ದೇನೆ ಅಂದುಕೊಂಡಿಲ್ಲ’ ಎಂದು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT