ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Gujarat Results: ರವೀಂದ್ರ ಜಡೇಜ ಪತ್ನಿ ರಿವಾಬಾ ಜಡೇಜಗೆ ಗೆಲುವು

Last Updated 8 ಡಿಸೆಂಬರ್ 2022, 9:42 IST
ಅಕ್ಷರ ಗಾತ್ರ

ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಜಾಮ್‌ನಗರ (ಉತ್ತರ) ಕ್ಷೇತ್ರದಿಂದ ಸ್ಪರ್ಧಿಸಿರುವ ಕ್ರಿಕೆಟಿಗ ರವೀಂದ್ರ ಜಡೇಜ ಅವರ ಪತ್ನಿ, ಬಿಜೆಪಿ ಅಭ್ಯರ್ಥಿ ರಿವಾಬಾ ಜಡೇಜ ಭರ್ಜರಿ ಗೆಲುವು ದಾಖಲಿಸಿದ್ದಾರೆ.

ರಿವಾಬಾ ಜಡೇಜ ಅವರು ತಮ್ಮ ಸಮೀಪದ ಸ್ಪರ್ಧಿ ಆಮ್ ಆದ್ಮಿ ಪಕ್ಷದ ಕರ್ಸನ್ ಕರ್ಮುರ್ ಅವರನ್ನು 40,000ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದರು.

ಕಾಂಗ್ರೆಸ್‌ನ ಭಿಪೇಂದ್ರಸಿನ್ಹ ಜಡೇಜ ಮೂರನೇ ಸ್ಥಾನ ಪಡೆದು ಹಿನ್ನಡೆ ಅನುಭವಿಸಿದರು.

ಬಿಜೆಪಿ ತನ್ನ ಹಾಲಿ ಶಾಸಕ ಧಮೇಂದ್ರ ಸಿನ್ಹ ಜಡೇಜ ಅವರನ್ನು ಕೈಬಿಟ್ಟು ಜಡೇಜ ಪತ್ನಿ ರಿವಾಬಾಗೆ ಟಿಕೆಟ್ ನೀಡಿತ್ತು.

ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆಯೇ, ರಿವಾಬಾ ಜಡೇಜ ಬೃಹತ್ ರೋಡ್ ಶೋದಲ್ಲಿ ಭಾಗಿಯಾದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT