Gujarat Results: ಇದು ಸೈದ್ಧಾಂತಿಕ ಸಂಘರ್ಷ, ಹೋರಾಟ ಮುಂದುವರಿಯಲಿದೆ: ಖರ್ಗೆ

ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಎದುರಾಗಿರುವ ಹೀನಾಯ ಸೋಲಿನ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಅಧ್ಯಕ್ಷ, ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಇದು ಸೈದ್ಧಾಂತಿಕ ಸಂಘರ್ಷವಾಗಿದ್ದು, ಹೋರಾಟ ಮುಂದುವರಿಯಲಿದೆ ಎಂದು ಹೇಳಿದ್ದಾರೆ.
ಈ ಕುರಿತು ಸುದ್ದಿಸಂಸ್ಥೆ 'ಎಎನ್ಐ' ಟ್ವೀಟ್ ಮಾಡಿದೆ.
ಗುಜರಾತ್ ವಿಧಾನಸಭೆ ಸೋಲನ್ನು ಒಪ್ಪಿಕೊಳ್ಳುತ್ತೇವೆ. ವಿಜೇತರನ್ನು ಅಭಿನಂದಿಸುತ್ತೇವೆ ಎಂದು ಹೇಳಿದರು.
ನಮ್ಮ ಹೋರಾಟ ನಿರಂತರವಾಗಿದ್ದು, ಪ್ರಜಾತಂತ್ರ ವ್ಯವಸ್ಥೆಯಲ್ಲಿ ಒಂದು ದಿನದ ಸೋಲು-ಗೆಲುವು ಶಾಶ್ವತವಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವು ಸಾಮಾನ್ಯವಾಗಿದ್ದು, ನಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದರು.
#WATCH | I am not taking credit for it... In a democracy wins and losses happen. It's our ideological fight. We will correct the shortcomings and continue to fight: Congress President M Kharge when asked about the party's poor performance in #GujaratAssemblyPolls pic.twitter.com/Iv26qfIeps
— ANI (@ANI) December 8, 2022
ಇದು ಸೈದ್ಧಾಂತಿಕ ಸಂಘರ್ಷವಾಗಿದ್ದು, ಸೋಲು-ಗೆಲುವು ಸಂಭವಿಸಬಹುದು. ನಮ್ಮ ಲೋಪಗಳನ್ನು ಸರಿಪಡಿಸಿಕೊಂಡು ಹೋರಾಟ ಮುಂದುವರಿಸಲಿದ್ದೇವೆ ಎಂದು ತಿಳಿಸಿದರು.
ಹಿಮಾಚಲ ಪ್ರದೇಶದ ಜನತೆಗೆ ಧನ್ಯವಾದ...
ಏತನ್ಮಧ್ಯೆ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗಾಗಿ ಜನರಿಗೆ ಮಲ್ಲಿಕಾರ್ಜುನ ಖರ್ಗೆ ಧನ್ಯವಾದ ಸಲ್ಲಿಸಿದರು. ಎಲ್ಲರ ಬೆಂಬಲದಿಂದ ಈ ಫಲಿತಾಂಶ ದೊರಕಿದೆ. ಈ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಧನ್ಯವಾದ ಸಲ್ಲಿಸುತ್ತಿದ್ದು, ರಾಹುಲ್ ಗಾಂಧಿ ಅವರ ಭಾರತ್ ಜೋಡೊ ಯಾತ್ರೆ ಸಹ ನೆರವಾಗಿದೆ. ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅವರ ಆಶೀರ್ವಾದವೂ ನಮ್ಮ ಮೇಲಿದೆ ಎಂದು ಹೇಳಿದರು.
We have won #HimachalElections. I want to thank the people, our workers & leaders as due to their efforts this result has come. I want to thank Priyanka Gandhi, Rahul Gandhi's Bharat Jodo Yatra also helped us in this. Sonia Gandhi's blessings are also with us: Congress President pic.twitter.com/T9XIKRQ4Xq
— ANI (@ANI) December 8, 2022
ಇದನ್ನೂ ಓದಿ:
LIVE | ವಿಧಾನಸಭೆ ಚುನಾವಣೆ ಫಲಿತಾಂಶ: ಗುಜರಾತ್ನಲ್ಲಿ ಬಿಜೆಪಿ, ಹಿಮಾಚಲದಲ್ಲಿ ಕಾಂಗ್ರೆಸ್ ಮುನ್ನಡೆ
Himachal Pradesh Results Highlights: ಬಿಜೆಪಿ–ಕಾಂಗ್ರೆಸ್ ನಡುವೆ ಪೈಪೋಟಿ
Gujarat Election Results: 7ನೇ ಬಾರಿ ಅಧಿಕಾರದ ಗದ್ದುಗೆ ಏರಲು ಬಿಜೆಪಿ ಸಜ್ಜು
Gujarat Election Results: ಹಾರ್ದಿಕ್ ಪಟೇಲ್ಗೆ ಅಲ್ಪ ಮುನ್ನಡೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.