ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌: ‘ಏಕತಾ ಪ್ರತಿಮೆ’ಗೆ 50 ಲಕ್ಷಕ್ಕೂ ಹೆಚ್ಚು ಪ್ರವಾಸಿಗರ ಭೇಟಿ

Last Updated 15 ಮಾರ್ಚ್ 2021, 8:33 IST
ಅಕ್ಷರ ಗಾತ್ರ

ಅಹಮದಾಬಾದ್: ‘ಗುಜರಾತ್‌ನ ನರ್ಮದಾ ಜಿಲ್ಲೆಯ ಕೆವಡಿಯಾದಲ್ಲಿರುವ ಏಕತಾ ಪ್ರತಿಮೆಗೆ ಈವರೆಗೆ 50 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡಿದ್ದಾರೆ. ಇದೊಂದು ಪ್ರಮುಖ ಮೈಲಿಗಲ್ಲು’ ಎಂದು ಸರ್ಕಾರಿ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದರು.

‘ಏಕತಾ ಪ್ರತಿಮೆಯು ಅಂತರರಾಷ್ಟ್ರೀಯ ಪ್ರವಾಸಿ ತಾಣವಾಗಿ ಹೊರಹೊಮ್ಮಿದೆ. ಇದು ಎಲ್ಲಾ ವಯಸ್ಸಿನವರನ್ನು ತನ್ನತ್ತ ಆಕರ್ಷಿಸುತ್ತಿದೆ’ ಎಂದು ಗುಜರಾತ್‌ನ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಅರಣ್ಯ ಮತ್ತು ಪರಿಸರ) ರಾಜೀವ್ ಗುಪ್ತ ಅವರು ಟ್ವೀಟ್‌ ಮಾಡಿದ್ದಾರೆ.

2018ರ ಅಕ್ಟೋಬರ್‌ 31 ರಂದು ಪ್ರಧಾನಿ ನರೇಂದ್ರ ಮೋದಿ ಅವರು ‘ಏಕತಾ ಪ್ರತಿಮೆ’ಯನ್ನು ಉದ್ಘಾಟಿಸಿದರು. 182 ಮೀಟರ್‌ ಎತ್ತರದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಪ್ರತಿಮೆಯು ವಿಶ್ವದ ಅತಿ ಎತ್ತರವಾದ ಪ್ರತಿಮೆಯಾಗಿದೆ.

‘ಅಂದಿನಿಂದ ದೇಶ–ವಿದೇಶಗಳಿಂದ ಪ್ರವಾಸಿಗರು ಏಕತಾ ಪ್ರತಿಮೆಯನ್ನು ನೋಡಲು ಆಗಮಿಸುತ್ತಿದ್ದಾರೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT