ಗುಜರಾತ್‌ನಲ್ಲಿ ಕಾರು, ಲಾರಿಗಳ ಮೇಲೆ ಕಲ್ಲು ತೂರಾಟ; 7 ವಾಹನಗಳು ಜಖಂ

ಆನಂದ್: ಗುಜರಾತ್‌ನ ಆನಂದ್ ಜಿಲ್ಲೆಯ ವಡೋದರಾ-ಅಹಮದಾಬಾದ್ ಎಕ್ಸ್‌ಪ್ರೆಸ್ ವೇ ಹೆದ್ದಾರಿಯಲ್ಲಿ ಮಂಗಳವಾರ ಚಲಿಸುತ್ತಿದ್ದ ಲಾರಿಗಳು ಮತ್ತು ಕಾರುಗಳ ಮೇಲೆ ಅಪರಿಚಿತ ವ್ಯಕ್ತಿಗಳು ಕಲ್ಲುಗಳನ್ನು ತೂರಿದ್ದರಿಂದ ಏಳು ವಾಹನಗಳಿಗೆ ಹಾನಿಯಾಗಿದೆ‘ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ಎಕ್ಸ್‌ಪ್ರೆಸ್‌ವೇನಲ್ಲಿ ಅಹಮದಾಬಾದ್ ಕಡೆಗೆ ಹೋಗುತ್ತಿದ್ದ ವಾಹನಗಳ ಮೇಲೆ ಸಮರ್ಖಾ ಗ್ರಾಮದ ಬಳಿ ಅಪರಿಚಿತ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಲಾರಿಗಳು ಸೇರಿದಂತೆ ಏಳು ವಾಹನಗಳು ಜಖಂಗೊಂಡಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. ಕಿಡಿಗೇಡಿಗಳ ಪತ್ತೆಗೆ ತನಿಖೆ ನಡೆಸಲಾಗುತ್ತಿದೆ ಎಂದರು.
ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಅವರು ಹೇಳಿದರು. ಐಪಿಸಿ ಸೆಕ್ಷನ್ 308 (ಅಪರಾಧೀಯ ನರಹತ್ಯೆಗೆ ಯತ್ನ) ಅಡಿಯಲ್ಲಿ ಅಪರಿಚಿತ ಮೂವರು ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಎಕ್ಸ್‌ಪ್ರೆಸ್ ವೇ ಉದ್ದಕ್ಕೂ ಗಸ್ತು ಹೆಚ್ಚಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.