ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌ನಲ್ಲಿ ಬುಡಕಟ್ಟು ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ; ಆರೋಪಿಗಳ ಸೆರೆ

Last Updated 14 ಜುಲೈ 2021, 15:05 IST
ಅಕ್ಷರ ಗಾತ್ರ

ದಾಹೋದ್: ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ನಡೆದ ಅಮಾನವೀಯ ಘಟನೆಯೊಂದರಲ್ಲಿ ಬುಡಕಟ್ಟು ಜನಾಂಗದಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿ ಮೆರವಣಿಗೆ ಮಾಡಿದ ಆರೋಪದಡಿಯಲ್ಲಿ ಆಕೆಯ ಪತಿಸೇರಿದಂತೆ 19 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

23 ವರ್ಷದಮಹಿಳೆ ಬೇರೊಬ್ಬ ವ್ಯಕ್ತಿಯೊಂದಿಗೆ ಪರಾರಿಯಾಗಿದ್ದರು ಎಂದು ಆರೋಪಿಸಿ ಪತಿ ಹಾಗೂ ಸಂಬಂಧಿಕರು ನಿಷ್ಠುರವಾಗಿ ಹಲ್ಲೆ ನಡೆಸಿದ್ದಾರೆ. ಇದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಘಟನೆ ಸಂಬಂಧ ರಾಜ್ಯ ಮಹಿಳಾ ಆಯೋಗ ಸೇರಿದಂತೆ ಎಲ್ಲ ಮೂಲಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಮಹಿಳೆಯಪತಿ ಮತ್ತು 18 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇವರಲ್ಲಿ ಬಹುತೇಕರು ಆತನ ಸಂಬಂಧಿಕರು ಎಂದು ಧೋನಪುರ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಬಿ.ಎಂ. ಪಟೇಲ್ ತಿಳಿಸಿದರು.

ಜುಲೈ 6ರಂದು ಬುಡಕಟ್ಟು ಪ್ರಾಬಲ್ಯದ ಖಜುರಿ ಗ್ರಾಮದಲ್ಲಿ ಘಟನೆ ನಡೆದಿದೆ. ವಿಡಿಯೊದಲ್ಲಿಮಹಿಳೆ ಮೇಲೆ ಆಕೆಯ ಪತಿ ಹಾಗೂ ಇನ್ನಿತರರು ಎಳೆದಾಡುವುದು, ವಿವಸ್ತ್ರಗೊಳಿಸುವುದು ಮತ್ತು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಆಕೆಯ ಗಂಡನನ್ನು ಹೆಗಲ ಮೇಲೆ ಹೊತ್ತುಕೊಂಡು ನಡೆಯುವಂತೆ ಒತ್ತಾಯಿಸಿದ್ದರು ಎಂದು ಹೇಳಿದ್ದಾರೆ.

ಸಂತ್ರಸ್ತೆಮಹಿಳೆ ಬೇರೊಬ್ಬ ವ್ಯಕ್ತಿಯೊಂದಿಗೆ ಓಡಿ ಹೋಗಿದ್ದರೆಂದು ಆರೋಪಿಸಲಾಗಿದೆ. ಆಕೆಯ ಪತಿ ಹಾಗೂ ಗ್ರಾಮಸ್ಥರು ಪತ್ತೆ ಹಚ್ಚಿ ಊರಿಗೆ ಕರೆ ತಂದಿದ್ದರು. ಜುಲೈ 6ರಂದು ಸಾರ್ವಜನಿಕವಾಗಿ ಹಲ್ಲೆ ಮಾಡಿ ಅವಮಾನಿಸಲಾಗಿದೆ. ವಿಡಿಯೊದಲ್ಲಿ ಕಾಣಿಸಿಕೊಂಡಿರುವ ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಐಪಿಸಿ ಅಡಿಯಲ್ಲಿ ಗಲಭೆ, ಹಲ್ಲೆ, ಕ್ರಿಮಿನಲ್ ಬೆದರಿಕೆ, ಮಹಿಳೆಗೆ ಅವಮಾನ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯಲ್ಲಿ ವಿಡಿಯೊ ಸೆರೆ ಹಿಡಿದು ಹಂಚಿರುವ ಪ್ರಕರಣಗಳಲ್ಲಿ ದೂರು ದಾಖಲಿಸಲಾಗಿದೆ. ರಾಜ್ಯ ಮಹಿಳಾ ಆಯೋಗವು ಸಹ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ದಾಹೋದ್ ಪೊಲೀಸ್ ವರಿಷ್ಠಾಧಿಕಾರಿಗೆ ನಿರ್ದೇಶನ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT