ಶುಕ್ರವಾರ, ಜನವರಿ 27, 2023
27 °C

ಗುಜರಾತ್‌: ತ್ರಿಚಕ್ರ ವಾಹನಕ್ಕೆ ಕಂಟೈನರ್‌ ಡಿಕ್ಕಿ; 10 ಸಾವು, 7 ಮಂದಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಡೋದರ: ಗುಜರಾತ್‌ನ ವಡೋದರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಪೈಕಿ ಇಬ್ಬರು ಮಕ್ಕಳು ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ತ್ರಿಚಕ್ರ ವಾಹನವೊಂದಕ್ಕೆ ಕಂಟೈನರ್‌ ಟ್ರಕ್‌ ಡಿಕ್ಕಿ ಹೊಡೆದಿದೆ. ದುರಂತದಲ್ಲಿ ಗಾಯಗೊಂಡಿರುವ ಏಳು ಮಂದಿಯನ್ನು ವಡೋದರ ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಮಂಗಳವಾರ ಮಧ್ಯಾಹ್ನ ದುರ್ಘಟನೆ ಸಂಭವಿಸಿದೆ. ಕಂಟೈನರ್‌ ಟ್ರಕ್‌ ಮೇಲೆ ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದ ಮೊದಲು ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ರಸ್ತೆ ವಿಭಜಕವನ್ನು ಹಾರಿದ ಕಂಟೈನರ್‌ ವಿರುದ್ಧ ಧಿಕ್ಕಿನಿಂದ ಬರುತ್ತಿದ್ದ ತ್ರಿಚಕ್ರ ವಾಹನಕ್ಕೆ ಗುದ್ದಿದೆ. ಪರಿಣಾಮ ತ್ರಿಚಕ್ರ ವಾಹನವು ಸಂಪೂರ್ಣ ನಜ್ಜುಗುಜ್ಜಾಗಿದೆ. 

ದುರ್ಘಟನೆಗೆ ಸಂಬಂಧಿಸಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ವಿಷಾಧ ವ್ಯಕ್ತಪಡಿಸಿದ್ದಾರೆ. ಮೃತ ವ್ಯಕ್ತಿಯ ಕುಟುಂಬಕ್ಕೆ ತಲಾ ₹ 4 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ ₹ 50,000 ಪರಿಹಾರ ಘೋಷಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು