ನವದೆಹಲಿ:ಚುನಾವಣಾ ಆಯೋಗವುಪಂಜಾಬ್ ವಿಧಾನಸಭೆ ಚುನಾವಣೆ ದಿನಾಂಕವನ್ನು ಫೆಬ್ರುವರಿ 20ಕ್ಕೆ ಮುಂದೂಡಿದೆ. ಈ ಮೊದಲು ಫೆಬ್ರುವರಿ14ಕ್ಕೆ ಮತದಾನ ನಿಗದಿಯಾಗಿತ್ತು.

ಆಡಳಿತಾರೂಢ ಕಾಂಗ್ರೆಸ್ ಸೇರಿದಂತೆ, ಬಿಜೆಪಿ, ಪಂಜಾಬ್ ಲೋಕ ಕಾಂಗ್ರೆಸ್ ಹಾಗು ಇನ್ನಿತರಪಕ್ಷಗಳುಮತದಾನ ದಿನಾಂಕವನ್ನು ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದವು.ಹೀಗಾಗಿ ದಿನಾಂಕ ಮರುನಿಗದಿಗೊಳಿಸಲಾಗಿದೆ.

ಫೆಬ್ರುವರಿ 16ರಂದು ಗುರು ರವಿದಾಸ್ ಜಯಂತಿ ಇದೆ. ಹೀಗಾಗಿಸುಮಾರು 20 ಲಕ್ಷದಷ್ಟು ಜನರು ಉತ್ತರ ಪ್ರದೇಶದ ಬನಾರಸ್ಗೆ ಭೇಟಿ ನೀಡಿ ಜಯಂತಿ ಆಚರಿಸಲಿದ್ದಾರೆ. ಅವರಿಗೆ, ಮತದಾನದಲ್ಲಿ ಪಾಲ್ಗೊಳ್ಳಲು ತೊಂದರೆಯಾಗದಂತೆ ನೋಡಿಕೊಳ್ಳಲು, ಚುನಾವಣೆಯನ್ನು ಕನಿಷ್ಠ ಆರು ದಿನ ಮುಂದೂಡಬೇಕು ಎಂದು ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರಿಗೆ ಜನವರಿ 13ರಂದು ಪತ್ರ ಬರೆದಿದ್ದರು.

ಚುನಾವಣಾ ಆಯೋಗದ ಪ್ರಕಟಣೆ ಪ್ರಕಾರ, ನಾಮಪತ್ರ ಸಲ್ಲಿಸಲು ಫೆಬ್ರುವರಿ1 ಕೊನೆಯ ದಿನವಾಗಿದ್ದು, ವಾಪಸ್ ಪಡೆಯಲು ಫೆಬ್ರುವರಿ 2 ಕೊನೆದಿನ.ಮಾರ್ಚ್10ರಂದು ಫಲಿತಾಂಶ ಪ್ರಕಟವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.