ಶನಿವಾರ, ಡಿಸೆಂಬರ್ 3, 2022
28 °C

ಜ್ಞಾನವಾಪಿ: ಶಿವಲಿಂಗ ಪತ್ತೆಯಾದ ಪ್ರದೇಶ ಸಂರಕ್ಷಣೆ ಆದೇಶ ವಿಸ್ತರಿಸಿದ ‘ಸುಪ್ರೀಂ’

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ವಾರಾಣಸಿಯ ಜ್ಞಾನವಾಪಿ–ಶೃಂಗಾರ ಗೌರಿ ಸಂಕೀರ್ಣದ ಆವರಣದಲ್ಲಿ ಪತ್ತೆಯಾಗಿದೆ ಎನ್ನಲಾದ ‘ಶಿವಲಿಂಗ’ ಇರುವ ಪ್ರದೇಶವನ್ನು ಮುಂದಿನ ಆದೇಶದ ವರೆಗೆ ಸಂರಕ್ಷಣೆ ಮಾಡುವಂತೆ ಸುಪ್ರೀಂಕೋರ್ಟ್‌ ಶುಕ್ರವಾರ ಸೂಚಿಸಿದೆ.

ಅಲ್ಲದೇ, ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ಎಲ್ಲ ಅರ್ಜಿಗಳನ್ನು ಕ್ರೋಡಿಕರಿಸಿ ವಾರಾಣಸಿ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಲು ಹಿಂದೂ ಕಕ್ಷಿದಾರರಿಗೆ ಅನುಮತಿ ನೀಡಿದೆ.

ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ ಪಿ.ಎಸ್‌.ನರಸಿಂಹ ಅವರಿದ್ದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು.

ಸರ್ವೆ ಆಯುಕ್ತರ ನೇಮಕ ಮಾಡಿ ಅಲಹಾಬಾದ್‌ ಹೈಕೋರ್ಟ್‌ ನೀಡಿರುವ ಆದೇಶವನ್ನು ಪ್ರಶ್ನಿಸಿ ಅಂಜುಮನ್ ಇಂತೆಜಾಮಿಯಾ ಮಸೀದಿಯ ವ್ಯವಸ್ಥಾಪನಾ ಮಂಡಳಿ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿ ಮೂರು ವಾರಗಳ ಒಳಗಾಗಿ ಪ್ರತಿಕ್ರಿಯೆ ಸಲ್ಲಿಸುವಂತೆಯೂ ಹಿಂದೂ ಕಕ್ಷಿದಾರರಿಗೆ ನ್ಯಾಯಪೀಠ ನಿರ್ದೇಶನ ನೀಡಿತು.

ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾಗಿದೆ ಎನ್ನಲಾದ ಶಿವಲಿಂಗ ಇರುವ ಪ್ರದೇಶವನ್ನು ಸಂರಕ್ಷಣೆಗೆ ಸಂಬಂಧಿಸಿ ವಾರಾಣಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಗೆ ಸೂಚನೆ ನೀಡಿ ಸುಪ್ರೀಂಕೋರ್ಟ್‌ ಮೇ 17ರಂದು ಮಧ್ಯಂತರ ಆದೇಶ ನೀಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು