ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ್ಞಾನವಾಪಿ ಪ್ರಕರಣ: ಜುಲೈ 4ಕ್ಕೆ ಮುಸ್ಲಿಮರ ಪರ ವಾದ ಆಲಿಕೆ

Last Updated 30 ಮೇ 2022, 15:19 IST
ಅಕ್ಷರ ಗಾತ್ರ

ವಾರಾಣಸಿ: ಕಾಶಿ ವಿಶ್ವನಾಥ– ಜ್ಞಾನವಾಪಿ ಸಂಕೀರ್ಣದಲ್ಲಿರುವ ಶೃಂಗಾರ ಗೌರಿ ಸ್ಥಳದಲ್ಲಿ ದೈನಂದಿನ ಪೂಜೆಗೆ ಅನುಮತಿ ಕೋರಿ ಐವರು ಹಿಂದೂ ಮಹಿಳೆಯರು ಸಲ್ಲಿಸಿರುವ ಅರ್ಜಿಯ ಕುರಿತು ಸೋಮವಾರ ವಾದ ಆಲಿಸಿದ ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್, ಜುಲೈ 4ರಂದು ಮುಸ್ಲಿಮರ ವಾದವನ್ನು ಆಲಿಸುವುದಾಗಿ ಹೇಳಿದ್ದಾರೆ.

‘ಸೋಮವಾರದ ವಿಚಾರಣೆಯ ಸಂದರ್ಭದಲ್ಲಿ, ಮುಸ್ಲಿಂ ಕಡೆಯವರು ಮನವಿಯ ನಿರ್ವಹಣೆಯ ವಿರುದ್ಧ ವಾದಿಸಿದರು’ ಎಂದು ಜಿಲ್ಲಾ ಸರ್ಕಾರಿ ವಕೀಲ ರಾಣಾ ಸಂಜೀವ್ ಸಿಂಗ್ ಹೇಳಿದ್ದಾರೆ.

ಹಿಂದೂ ಪರ ವಕೀಲ ವಿಷ್ಣುಶಂಕರ್ ಜೈನ್ ಸುದ್ದಿಗಾರರೊಂದಿಗೆ ಮಾತನಾಡಿ, ‘ಸಂಕೀರ್ಣದ ವಿಡಿಯೋಗ್ರಫಿ ಸಮೀಕ್ಷೆಯ ವರದಿಯನ್ನು ಎಲ್ಲಾ ಕಕ್ಷಿದಾರರಿಗೆ ಲಭ್ಯವಾಗುವಂತೆ ನ್ಯಾಯಾಲಯವು ಸ್ಪಷ್ಟವಾಗಿ ಹೇಳಿದೆ. ಆದರೆ, ಇದಕ್ಕೆ ಷರತ್ತುಗಳೇನು ಎಂಬುದನ್ನು ನ್ಯಾಯಾಲಯವೇ ಹೇಳಲಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT