ಶನಿವಾರ, ಜೂನ್ 25, 2022
25 °C

ಜ್ಞಾನವಾಪಿ ಪ್ರಕರಣ| ಸಮೀಕ್ಷೆ ವರದಿ ಜಿಲ್ಲಾ ನ್ಯಾಯಾಲಯಕ್ಕೆ ಹಸ್ತಾಂತರ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ವಾರಾಣಸಿ: ಜ್ಞಾನವಾಪಿ ಮಸೀದಿಯ ಸಮೀಕ್ಷೆ ವರದಿಯನ್ನು ಸಿವಿಲ್‌ ನ್ಯಾಯಾಲಯವು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಿಗೆ ಶನಿವಾರ ಹಸ್ತಾಂತರಿಸಿದೆ.

ಜ್ಞಾನವಾಪಿ ಮಸೀದಿಯಲ್ಲಿ ಹಿಂದೂ ಧಾರ್ಮಿಕ ಕುರುಹುಗಳಿದ್ದು, ಅಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಿ ಎಂದು ಹಿಂದೂ ಮಹಿಳೆಯರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸಿವಿಲ್‌ ನ್ಯಾಯಾಲಯದಿಂದ, ವಾರಾಣಸಿಯ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾಯಿಸಿ ಸುಪ್ರೀಂ ಕೋರ್ಟ್‌ ಶುಕ್ರವಾರ ಆದೇಶ ನೀಡಿತ್ತು.

ಈ ಹಿನ್ನೆಲೆಯಲ್ಲಿ ಸಿವಿಲ್‌ ನ್ಯಾಯಾಲಯವು ಶನಿವಾರ ವರದಿಯನ್ನು ಹಸ್ತಾಂತರಿಸಿದೆ.

‘ವಿಷಯದ ಸಂಕೀರ್ಣತೆ ಮತ್ತು ಸೂಕ್ಷ್ಮತೆ ದೃಷ್ಟಿಯಿಂದ ಈ ಮೊಕದ್ದಮೆಯ ವಿಚಾರಣೆಯನ್ನು ನ್ಯಾಯಾಂಗ ವ್ಯವಸ್ಥೆಯ ಹಿರಿಯ ಅಧಿಕಾರಿ ನಡೆಸುವುದು ಸೂಕ್ತ’ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿತ್ತು.

ಜ್ಞಾನವಾಪಿ ಮಸೀದಿಯ ಹೊರಗಿನ ಗೋಡೆ ಮೇಲಿರುವ ಶೃಂಗಾರ ಗೌರಿ, ಗಣೇಶ, ಹನುಮಾನ್ ಮತ್ತು ನಂದಿ ವಿಗ್ರಹಗಳಿಗೆ ಪ್ರತಿನಿತ್ಯ ಪೂಜೆ ಮಾಡಲು ಅನುಮತಿ ಕೋರಿ ದೆಹಲಿಯ ಮಹಿಳೆಯರಾದ ರಾಖಿ ಸಿಂಗ್, ಲಕ್ಷ್ಮಿ ದೇವಿ, ಸೀತಾ ಸಾಹು ಮತ್ತು ಇತರರು ಸಲ್ಲಿಸಿದ ಮನವಿಯ ಮೇರೆಗೆ ಸಿವಿಲ್‌ ನ್ಯಾಯಾಧೀಶ ದಿವಾಕರ್ ಅವರು ಮಸೀದಿಯ ವಿಡಿಯೊಗ್ರಫಿ ಮತ್ತು ಸಮೀಕ್ಷೆಗೆ ಆದೇಶಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು