ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌3ಎನ್‌2 ಭೀತಿ: 11 ದಿನಗಳ ನಂತರ ಪುದುಚೇರಿ ಶಾಲೆಗಳು ಪುನರಾರಂಭ

Last Updated 27 ಮಾರ್ಚ್ 2023, 9:10 IST
ಅಕ್ಷರ ಗಾತ್ರ

ಪುದುಚೇರಿ: ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಎಚ್‌3ಎನ್‌2 ಪ್ರಕರಣಗಳ ಹೆಚ್ಚಳದಿಂದಾಗಿ ಕಳೆದ 11 ದಿನಗಳಿಂದ ಮುಚ್ಚಲಾಗಿದ್ದ ಶಾಲೆಗಳು ಇಂದು ಪುನಃ ತೆರೆದಿವೆ.

ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಓದುತ್ತಿರುವ 1ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾರ್ಚ್‌ 15ರಿಂದ 26 ರವರೆಗೆ ರಾಜ್ಯ ಶಿಕ್ಷಣ ಸಚಿವ ಎಸ್. ನಮಶಿವಾಯಂ ರಜೆ ಘೋಷಿಸಿದ್ದರು.

ಪುದುಚೇರಿ, ಕಾರೈಕ್ಕಲ್, ಯಾನಂ ಮತ್ತು ಮಾಹೆ ಸ್ಥಳಗಳಲ್ಲಿನ ಎಲ್ಲಾ ಶಾಲೆಗಳಿಗೆ ರಜೆ ನೀಡಿತ್ತು.

ಪುದುಚೇರಿಯಲ್ಲಿ H3N2 ಇನ್‌ಫ್ಲುಯೆಂಜಾ ಪ್ರಕರಣಗಳು ಹೆಚ್ಚಳವಾಗಿದೆ ಎಂದು ವರದಿಯಾಗಿದೆ. ಆದರೆ ಯಾವುದೇ ಸಾವುಗಳು ಸಂಭವಿಸಿಲ್ಲ ಎಂದು ಸರ್ಕಾರ ತಿಳಿಸಿದೆ.

ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ H3N2 ಇನ್‌ಫ್ಲುಯೆಂಜಾ ಪ್ರಕರಣಗಳನ್ನು ತಡೆಗಟ್ಟುವುದು ಅಗತ್ಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT