ಬುಧವಾರ, ಜುಲೈ 6, 2022
22 °C

ಹನುಮಾನ್ ಚಾಲೀಸಾ ವಿವಾದ: ರಾಣಾ ದಂಪತಿ ವಿರುದ್ಧದ ಎಫ್‌ಐಆರ್ ವಜಾಕ್ಕೆ ಕೋರ್ಟ್ ನಕಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಹನುಮಾನ್ ಚಾಲೀಸಾ ವಿವಾದಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಸಂಸದೆ ನವನೀತ್ ಕೌರ್ ರಾಣಾ ಮತ್ತು ಅವರ ಪತಿ, ಶಾಸಕ ರವಿ ರಾಣಾ ಅವರು ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.

ಪೊಲೀಸ್ ಅಧಿಕಾರಿಗೆ ತಮ್ಮ ಕರ್ತವ್ಯ ನಿರ್ವಹಿಸದಂತೆ ತಡೆದ ಆರೋಪದ ಮೇರೆಗೆ ಮುಂಬೈನ ಖಾರ್ ಪೊಲೀಸರು ರಾಣಾ ದಂಪತಿ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಇದನ್ನು ರದ್ದುಗೊಳಿಸುವಂತೆ ಕೋರಿ ದಂಪತಿ ಸೋಮವಾರ ಬೆಳಿಗ್ಗೆ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದರು.

ನ್ಯಾಯಮೂರ್ತಿಗಳಾದ ಪಿ.ಬಿ.ವರಾಲೆ ಮತ್ತು ಎಸ್.ಎಂ.ಮೋದಕ್ ಅವರನ್ನೊಳಗೊಂಡ ನ್ಯಾಯಪೀಠವು, ರಾಣಾ ದಂಪತಿಯ ಅರ್ಜಿಯನ್ನು ವಜಾಗೊಳಿಸಿತು.

ಮುಂಬೈನಲ್ಲಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಖಾಸಗಿ ನಿವಾಸದ ಹೊರಗೆ ಹನುಮಾನ್ ಚಾಲೀಸಾವನ್ನು ಪಠಿಸಲಾಗುವುದು ಎಂದು ರಾಣಾ ದಂಪತಿ ಘೋಷಿಸಿದ್ದರು. ಬಳಿಕ ದಂಪತಿ ವಿರುದ್ಧ ಪೊಲೀಸರು ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಎರಡು ಭಿನ್ನ ಧರ್ಮಗಳ ನಡುವೆ ದ್ವೇಷವನ್ನು ಪ್ರಚೋದಿಸುವ ಆರೋಪದ ಮೇರೆಗೆ ಏ. 23ರಂದು ರಾಣಾ ದಂಪತಿ ವಿರುದ್ದ ಪೊಲೀಸರು ದೇಶದ್ರೋಹದ ಕಾಯ್ದೆಯಡಿ ಮೊದಲ ಎಫ್‌ಐಆರ್ ದಾಖಲಿಸಿದ್ದರು. ಸಾರ್ವಜನಿಕ ಸೇವೆಯಲ್ಲಿರುವ ವ್ಯಕ್ತಿಗೆ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿದ ಆರೋಪದ ಮೇರೆಗೆ ಏ. 24ರಂದು ಐಪಿಸಿ ಸೆಕ್ಷನ್ 353ರ ಅಡಿಯಲ್ಲಿ ಎರಡನೇ ಎಫ್‌ಐಆರ್ ದಾಖಲಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು